Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಸ್ಥಳೀಯ ಯುವಕರಿಗೆ ಉದ್ಯೋಗ,...

Ballari | ಸ್ಥಳೀಯ ಯುವಕರಿಗೆ ಉದ್ಯೋಗ, ಕೌಶಲ್ಯ ತರಬೇತಿಗೆ ಆಗ್ರಹಿಸಿ ಕರವೇ ಮನವಿ

ವಾರ್ತಾಭಾರತಿವಾರ್ತಾಭಾರತಿ22 Sept 2026 7:52 PM IST
share
Ballari | ಸ್ಥಳೀಯ ಯುವಕರಿಗೆ ಉದ್ಯೋಗ, ಕೌಶಲ್ಯ ತರಬೇತಿಗೆ ಆಗ್ರಹಿಸಿ ಕರವೇ ಮನವಿ

ಸಂಡೂರು/ಬಳ್ಳಾರಿ: ಪಟ್ಟಣದ ಸಾರ್ವಜನಿಕ ಹಿತಾಸಕ್ತಿ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಕರ್ನಾಟಕ ರಕ್ಷಣಾ ವೇದಿಕೆ (ರಿ.) ಕುರೇಕುಪ್ಪ ಘಟಕದ ನಿಯೋಗವು ಮಂಗಳವಾರ JSW ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿತು.

ನಿಯೋಗವು ಸ್ಥಳೀಯ ಅರ್ಹ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವುದು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಆಧಾರಿತ ತರಬೇತಿ ನೀಡುವುದು, ತರಬೇತಿ ಪಡೆಯುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿತು.

ಒಂದೇ ಕೆಲಸ ಮತ್ತು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಹಾಗೂ ಹೊರಗಿನ ಕಾರ್ಮಿಕರ ನಡುವೆ ವೇತನ ವ್ಯತ್ಯಾಸವಿದ್ದರೆ ಪರಿಶೀಲಿಸಿ ಸಮಾನ ವೇತನ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು. ಜೊತೆಗೆ ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳ ಗಮನ ಸೆಳೆಯಲಾಯಿತು.

JSW ವ್ಯಾಪ್ತಿಯಲ್ಲಿ ಕುರೇಕುಪ್ಪ ಪುರಸಭೆ ವ್ಯಾಪ್ತಿಗೆ ಸೇರಿದ ಪ್ರದೇಶಗಳನ್ನು ‘ತೋರಣಗಲ್ಲು’ ಎಂದು ಗುರುತಿಸುವ ಬದಲು ಅಧಿಕೃತವಾಗಿ ‘ಕುರೇಕುಪ್ಪ’ ಹೆಸರನ್ನೇ ಬಳಸುವಂತೆ ನಿಯೋಗ ಆಗ್ರಹಿಸಿತು.

ಕುರೇಕುಪ್ಪ ಪುರಸಭೆಯ ಐದು ವಾರ್ಡ್‌ಗಳು JSW ವ್ಯಾಪ್ತಿಯಲ್ಲಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತಾತ್ಮಕ ಗುರುತಿಗೆ ಅನುಗುಣವಾಗಿ ‘ಕುರೇಕುಪ್ಪ’ ಹೆಸರನ್ನು ಬಳಸಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು.

JJ Associates ಮೂಲಕ JSW Steelನಲ್ಲಿ ಪೆಟ್ರೋಲ್ ಟ್ಯಾಂಕರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಶ್ರೀಕಾಂತಗೌಡ ಅವರು 2025ರ ಜೂನ್ 21ರಂದು ಕರ್ತವ್ಯದಲ್ಲಿದ್ದ ವೇಳೆ ಅಸ್ವಸ್ಥಗೊಂಡು ಮೃತಪಟ್ಟ ಪ್ರಕರಣವನ್ನೂ ನಿಯೋಗ ಪ್ರಸ್ತಾಪಿಸಿತು.

PF, EDLI ಹಾಗೂ ಪಿಂಚಣಿ ಯೋಜನೆಯಡಿ ದೊರೆಯಬೇಕಾದ ಸೌಲಭ್ಯಗಳು ಕುಟುಂಬಕ್ಕೆ ಲಭಿಸಿದ್ದರೂ, JSW Steel ಹಾಗೂ ಸಂಬಂಧಿತ ಗುತ್ತಿಗೆ ಸಂಸ್ಥೆಯಿಂದ ದೊರೆಯಬೇಕಿರುವ ಪರಿಹಾರ ಮತ್ತು ಆರ್ಥಿಕ ನೆರವು ಇನ್ನೂ ಬಾಕಿಯಿದೆ ಎಂದು ತಿಳಿಸಿ, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

JSW ಸಿಇಒ ಪಿ.ಕೆ. ಮುರುಗನ್ ಗೈರಾಗಿದ್ದ ಹಿನ್ನೆಲೆಯಲ್ಲಿ, ಪಿಆರ್ ವಿಭಾಗದ ಶಶಿಕುಮಾರ್ ಮತ್ತು ಕಾಶಿನಾಥ್ ನಿಯೋಗದಿಂದ ಮನವಿ ಸ್ವೀಕರಿಸಿ, ವಿಷಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ರಿ.) ಕುರೇಕುಪ್ಪ ಘಟಕದ ಅಧ್ಯಕ್ಷ ಮಲ್ಲಯ್ಯ ಎನ್., ಪ್ರಧಾನ ಕಾರ್ಯದರ್ಶಿ ಹೊನ್ನೂರಸ್ವಾಮಿ ಎನ್. ಸೇರಿದಂತೆ ನಿಯೋಗದ ಸದಸ್ಯರು ಉಪಸ್ಥಿತರಿದ್ದರು.

Tags

karaveBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X