Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕೆಪಿಎಸ್ ಯೋಜನೆ ಸಾರ್ವಜನಿಕ...

Ballari | ಕೆಪಿಎಸ್ ಯೋಜನೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮರಣಶಾಸನ : ಕಂಬಳಿ ಮಂಜುನಾಥ್ ಆರೋಪ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ25 Nov 2026 7:01 PM IST
share
Ballari | ಕೆಪಿಎಸ್ ಯೋಜನೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮರಣಶಾಸನ : ಕಂಬಳಿ ಮಂಜುನಾಥ್ ಆರೋಪ

ಬಳ್ಳಾರಿ : ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಷರತ್ತುಬದ್ಧ ಸಾಲದ ನೆರವಿನೊಂದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಯು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮರಣಶಾಸನವಾಗಲಿದೆ ಎಂದು ಎಐಡಿಎಸ್‌ಒ ಕಾರ್ಯದರ್ಶಿ ಕಂಬಳಿ ಮಂಜುನಾಥ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಪಂಚಾಯಿತಿಗಳಿಗೆ ಒಂದರಂತೆ ಒಟ್ಟು 3,674 ಕೆಪಿಎಸ್ ಶಾಲಾ ಸಂಕೀರ್ಣಗಳನ್ನು ಆರಂಭಿಸಿ, ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳ ದಾಖಲಾತಿ ಕಡ್ಡಾಯಗೊಳಿಸಲಾಗುತ್ತಿದೆ. ಇದರ ಪರಿಣಾಮವಾಗಿ ರಾಜ್ಯದ 45,326 ಸರ್ಕಾರಿ ಶಾಲೆಗಳು ಶಾಶ್ವತವಾಗಿ ಮುಚ್ಚಲಿವೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ 500ಕ್ಕೂ ಅಧಿಕ ಶಾಲೆಗಳು ಬಾಗಿಲು ಮುಚ್ಚುವ ಭೀತಿಯಲ್ಲಿದ್ದು, ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗೆ ಈ ಯೋಜನೆ ಮಾರಕವಾಗಲಿದೆ ಎಂದು ದೂರಿದರು.

ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ, ರಾಯಚೂರಿನ ಇಡಪನೂರು, ಸ್ಟೇಷನ್ ರಸ್ತೆ ಹಾಗೂ ಕನಕಪುರದ ಹೆಗ್ಗನೂರು ಕೆಪಿಎಸ್ ಶಾಲೆಗಳಿಗೆ ಸುತ್ತಮುತ್ತಲಿನ ಹತ್ತಾರು ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚಲು ಆದೇಶಿಸಲಾಗಿದೆ. ಮೊದಲ ಹಂತದಲ್ಲಿ 2,000 ಶಾಲೆಗಳ ನಿರ್ವಹಣೆಯನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಸಂಸ್ಥೆಗಳಿಗೆ ವಹಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. 2030ರ ನಂತರ ಸರ್ಕಾರಿ ಅನುದಾನವನ್ನೂ ಸ್ಥಗಿತಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಾಗೂ ಎಡಿಬಿ ಸಾಲದ ಒಪ್ಪಂದವನ್ನು ತಕ್ಷಣವೇ ಹಿಂಪಡೆಯಬೇಕು. ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ, ರಾಜ್ಯದಲ್ಲಿ ಖಾಲಿ ಇರುವ 70 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸಲಹೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಉಪ್ಪಾರ್ ನರಸಣ್ಣ, ಸದಸ್ಯ ಮಾನಯ್ಯ, ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷೆ ಶಾಂತಿ, ಖಜಾಂಚಿ ಅನುಪಮಾ ಹಾಗೂ ಕಚೇರಿ ಕಾರ್ಯದರ್ಶಿ ನಿಹಾರಿಕ ಉಪಸ್ಥಿತರಿದ್ದರು.

Tags

BallariKPS schemeeducation
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X