Ballari | ಸಮಯಕ್ಕೆ ಬಾರದ ಕೆಎಸ್ಆರ್ಟಿಸಿ ಬಸ್ಗಳು: ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ

ಕುರುಗೋಡು (ಬಳ್ಳಾರಿ): ನಿಗದಿತ ಸಮಯಕ್ಕೆ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸದಿರುವುದನ್ನು ಖಂಡಿಸಿ ತಾಲೂಕಿನ ಎಚ್. ವೀರಾಪುರ ಗ್ರಾಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ವಿಜಯಕುಮಾರ, ಪ್ರತಿದಿನ ಬಸ್ಗಳು ವಿಳಂಬವಾಗಿ ಸಂಚರಿಸುತ್ತಿರುವುದರಿಂದ ಸಕಾಲಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪ್ರತಿದಿನ ಇದೇ ಪರಿಸ್ಥಿತಿ ಮುಂದುವರಿದರೆ ನಮ್ಮ ವಿದ್ಯಾಭ್ಯಾಸದ ಗತಿಯೇನು? ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವುದು ಹೇಗೆ? ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಬಸ್ಗಳೇ ಪ್ರಮುಖ ಆಸರೆಯಾಗಿವೆ. ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ ಗ್ರಾಮದ ಮುಖಂಡರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಅಲಕ್ಷಿಸುತ್ತಿರುವ ಸಾರಿಗೆ ಇಲಾಖೆಯ ಧೋರಣೆಯನ್ನು ಖಂಡಿಸಿದರು. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ, ನಿಗದಿತ ವೇಳಾಪಟ್ಟಿಯಂತೆ ಹೆಚ್ಚುವರಿ ಬಸ್ಗಳನ್ನು ಓಡಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.




