Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಒಂದೇ ವಾಹನಕ್ಕೆ ಕುರುಗೋಡು...

Ballari | ಒಂದೇ ವಾಹನಕ್ಕೆ ಕುರುಗೋಡು ಅಗ್ನಿಶಾಮಕ ಠಾಣೆ ಸೀಮಿತ

ವಾರ್ತಾಭಾರತಿವಾರ್ತಾಭಾರತಿ27 May 2026 7:53 PM IST
share
Ballari | ಒಂದೇ ವಾಹನಕ್ಕೆ ಕುರುಗೋಡು ಅಗ್ನಿಶಾಮಕ ಠಾಣೆ ಸೀಮಿತ
ಅವಘಡ ಹೆಚ್ಚಾದರೂ ಹೊಸ ವಾಹನ ನೀಡದ ಇಲಾಖೆ ವಿರುದ್ಧ ಆಕ್ರೋಶ

ಬಳ್ಳಾರಿ / ಕುರುಗೋಡು : ಪಟ್ಟಣದ ಅಗ್ನಿಶಾಮಕ ಠಾಣೆಯಲ್ಲಿ ಪ್ರಸ್ತುತ ಒಂದೇ ಅಗ್ನಿಶಾಮಕ ವಾಹನ ಕಾರ್ಯನಿರ್ವಹಿಸುತ್ತಿದ್ದು, ಏಕಕಾಲಕ್ಕೆ ಹಲವು ಕಡೆ ಬೆಂಕಿ ಅವಘಡ ಸಂಭವಿಸಿದರೆ ಸಿಬ್ಬಂದಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿಂದೆ ಠಾಣೆಯಲ್ಲಿ ಎರಡು ವಾಹನಗಳಿದ್ದರೂ, 15 ವರ್ಷಗಳ ಸೇವೆ ಪೂರ್ಣಗೊಳಿಸಿದ್ದ ಒಂದು ವಾಹನವನ್ನು ಎರಡು ವರ್ಷಗಳ ಹಿಂದೆಯೇ ಸ್ಥಗಿತಗೊಳಿಸಲಾಗಿದೆ. ಕುರುಗೋಡು ತಾಲ್ಲೂಕಿನ 33 ಹಳ್ಳಿಗಳು, 25 ಕ್ಯಾಂಪ್ಗಳು ಸೇರಿದಂತೆ ಸಿರಿಗೇರಿ, ಕಂಪ್ಲಿ, ಎಮ್ಮಿಗನೂರು ಹಾಗೂ ಬಳ್ಳಾಪುರ ಭಾಗದ ಗ್ರಾಮಗಳು ಅಗ್ನಿ ಅವಘಡಗಳ ಸಂದರ್ಭದಲ್ಲಿ ಇದೇ ಠಾಣೆಯನ್ನು ಅವಲಂಬಿಸಿವೆ.

ಬೇಸಿಗೆಯ ತೀವ್ರತೆಯಿಂದ ಗುಡಿಸಲು, ಹುಲ್ಲಿನ ಬಣವೆ ಹಾಗೂ ಅಪಘಾತ ಸಂಬಂಧಿತ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಒಂದೇ ದಿನ ಎರಡು ಕಡೆ ಬೆಂಕಿ ಕಾಣಿಸಿಕೊಂಡರೆ ರಕ್ಷಣಾ ಕಾರ್ಯಾಚರಣೆ ನಡೆಸುವುದು ಕಷ್ಟಸಾಧ್ಯವಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ 30ರಿಂದ 50 ಕಿಲೋಮೀಟರ್ ದೂರದ ಬಳ್ಳಾರಿ ಅಥವಾ ಸಿರುಗುಪ್ಪದಿಂದ ವಾಹನಗಳು ಬರುವಷ್ಟರಲ್ಲಿ ಆಸ್ತಿಪಾಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ.

ಇತ್ತೀಚೆಗೆ ಪಟ್ಟಣದ ಮನೆಯೊಂದರಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡ ವೇಳೆ ಅಗ್ನಿಶಾಮಕ ವಾಹನ ಅಲ್ಲಿಗೆ ತೆರಳಿದ್ದಾಗಲೇ ಸೋಮಲಾಪುರ ಗ್ರಾಮದಲ್ಲಿ ಬಣವೆಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ಒಂದೇ ವಾಹನ ಇರುವುದರಿಂದ ಎರಡೂ ಕಡೆ ತಕ್ಷಣ ಸ್ಪಂದಿಸಲು ಸಾಧ್ಯವಾಗಿರಲಿಲ್ಲ. ವಾರ್ಷಿಕವಾಗಿ 100ಕ್ಕೂ ಹೆಚ್ಚು ಅಗ್ನಿ ಅವಘಡಗಳು ಸಂಭವಿಸುತ್ತಿದ್ದರೂ ಮತ್ತೊಂದು ವಾಹನ ನೀಡದಿರುವುದಕ್ಕೆ ರೈತ ಮುಖಂಡ ಗುರಳ್ಳಿ ರಾಜ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಠಾಣೆಯಲ್ಲಿ 26 ಸಿಬ್ಬಂದಿ ಇರಬೇಕಾದರೆ ಪ್ರಸ್ತುತ 21 ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 5 ಹುದ್ದೆಗಳು ಖಾಲಿ ಇವೆ. ಸಿಬ್ಬಂದಿಗೆ ವಸತಿಗೃಹ ನಿರ್ಮಿಸಲು ಈವರೆಗೂ ಸರ್ಕಾರಿ ಜಾಗ ಗುರುತಿಸದಿರುವುದು ಮತ್ತೊಂದು ಸಮಸ್ಯೆಯಾಗಿದೆ.

2005ರಲ್ಲಿ ಆರಂಭವಾದ ಠಾಣೆ :

2005ರಲ್ಲಿ ನಾರಾ ಸೂರ್ಯನಾರಾಯಣ ರೆಡ್ಡಿ ಅವರು ಶಾಸಕರಾಗಿದ್ದ ಅವಧಿಯಲ್ಲಿ ಎಪಿಎಂಸಿ ಉಪ ಮಾರುಕಟ್ಟೆಯ ಶೆಡ್‌ನಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸಲಾಗಿತ್ತು. ಬಳಿಕ 2010ರಲ್ಲಿ ಜಿ. ಜನಾರ್ಧನರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಹಾಗೂ ಟಿ.ಎಚ್. ಸುರೇಶ್ ಬಾಬು ಶಾಸಕರಾಗಿದ್ದ ಅವಧಿಯಲ್ಲಿ ಬಳ್ಳಾರಿ ರಸ್ತೆಯ ನೂತನ ಕಟ್ಟಡಕ್ಕೆ ಠಾಣೆ ಸ್ಥಳಾಂತರಿಸಲಾಯಿತು. ಠಾಣೆಗೆ ಸುಸಜ್ಜಿತ ಕಟ್ಟಡವಿದ್ದರೂ ವಸತಿಗೃಹಗಳ ಕೊರತೆ ಸಿಬ್ಬಂದಿಗೆ ತೊಂದರೆಯಾಗಿದೆ.

ಡಿವಿಜನ್ ಹಾಗೂ ಜಿಲ್ಲಾ ಕಚೇರಿಗಳಿಗೆ ವಾಹನ ಮತ್ತು ಸಿಬ್ಬಂದಿ ಕೊರತೆ ಕುರಿತು ಮನವಿ ಸಲ್ಲಿಸಲಾಗಿದೆ. ಹಂತ ಹಂತವಾಗಿ ವಾಹನ ಹಾಗೂ ಸಿಬ್ಬಂದಿ ಒದಗಿಸಲಾಗುವುದು ಎಂದು ಮೇಲಾಧಿಕಾರಿಗಳು ತಿಳಿಸಿದ್ದಾರೆ.

-ಎಂ. ಮೈಲಾರಪ್ಪ, ಅಗ್ನಿಶಾಮಕ ಠಾಣಾಧಿಕಾರಿ, ಕುರುಗೋಡು

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X