Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ‘ವಿಜಯನಗರ ಕಾಲದ ನಗರೀಕರಣ’...

Ballari | ‘ವಿಜಯನಗರ ಕಾಲದ ನಗರೀಕರಣ’ ಕುರಿತು ಪ್ರಥಮ ದತ್ತಿ ಉಪನ್ಯಾಸ ಕಾರ್ಯಕ್ರಮ

ವಿಜಯನಗರದ ನಗರೀಕರಣದ ಮರೆಮಾಚಿದ ಆಯಾಮಗಳ ಅಧ್ಯಯನ ಅಗತ್ಯ: ಡಾ.ಚಂದ್ರಶೇಖರ ಶಾಸ್ತ್ರಿ

ವಾರ್ತಾಭಾರತಿವಾರ್ತಾಭಾರತಿ17 Oct 2026 6:21 PM IST
share
Ballari | ‘ವಿಜಯನಗರ ಕಾಲದ ನಗರೀಕರಣ’ ಕುರಿತು ಪ್ರಥಮ ದತ್ತಿ ಉಪನ್ಯಾಸ ಕಾರ್ಯಕ್ರಮ

ಸಂಡೂರು/ಬಳ್ಳಾರಿ: ಇತಿಹಾಸವೆಂದರೆ ಕೇವಲ ರಾಜ-ಮಹಾರಾಜರ ಆಳ್ವಿಕೆ, ಯುದ್ಧಗಳು ಮತ್ತು ವಿಜಯಗಳ ದಾಖಲೆಯಲ್ಲ. ಅಂದಿನ ಜನಸಾಮಾನ್ಯರ ಬದುಕು, ಬವಣೆಗಳು, ಸಂಸ್ಕೃತಿ ಹಾಗೂ ಜೀವನಶೈಲಿಯ ನೈಜ ಚಿತ್ರಣವೂ ಆಗಿದೆ. ಇತಿಹಾಸದ ಇಂತಹ ಮರೆಮಾಚಿದ ಆಯಾಮಗಳನ್ನು ಯುವ ಸಂಶೋಧಕರು ಆಳವಾಗಿ ಅಧ್ಯಯನ ಮಾಡಿ ದಾಖಲಿಸಬೇಕು ಎಂದು ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಎಚ್.ಎಂ. ಚಂದ್ರಶೇಖರ ಶಾಸ್ತ್ರಿ ಕರೆ ನೀಡಿದರು.

ತಾಲೂಕಿನ ನಂದಿಹಳ್ಳಿಯ ಜ್ಞಾನ ಸರೋವರದಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ಮತ್ತು ಪುರಾತತ್ತ್ವ ಅಧ್ಯಯನ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ‘ವಿಜಯನಗರ ಕಾಲದ ನಗರೀಕರಣ’ ಕುರಿತ ಪ್ರಥಮ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ವಿಷಯ ಮಂಡಿಸಿದರು.

ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ನಗರ ನಿರ್ಮಾಣ, ಯೋಜನಾ ಶೈಲಿ, ವಾಸ್ತುಶಿಲ್ಪ ಹಾಗೂ ವ್ಯಾಪಾರ-ವಾಣಿಜ್ಯ ಕ್ಷೇತ್ರಗಳು ಉನ್ನತ ಮಟ್ಟದಲ್ಲಿದ್ದವು. ಅಂದಿನ ನಗರಗಳ ವೈಭವ, ನಿರ್ಮಾಣ ಕೌಶಲ ಮತ್ತು ವ್ಯವಸ್ಥಿತ ನಗರೀಕರಣವನ್ನು ಸಮಕಾಲೀನ ವಿದೇಶಿ ಪ್ರವಾಸಿಗರು ತಮ್ಮ ಬರಹಗಳಲ್ಲಿ ಪ್ರಶಂಸಿಸಿದ್ದಾರೆ. ಈ ಐತಿಹಾಸಿಕ ದಾಖಲೆಗಳನ್ನು ಆಧರಿಸಿ ವಿಜಯನಗರದ ನಗರ ಜೀವನದ ವಿವಿಧ ಆಯಾಮಗಳನ್ನು ಇಂದಿನ ತಲೆಮಾರಿಗೆ ಪರಿಚಯಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಪೋಷಕರ ಸ್ಮರಣಾರ್ಥ ದತ್ತಿ ಉಪನ್ಯಾಸ :

ದಿವಂಗತ ಎಸ್.ಡಿ. ಅಂಜನೇಯ ಮತ್ತು ನಾರಾಯಣಮ್ಮ ಅವರ ಸ್ಮರಣಾರ್ಥ ಆಯೋಜಿಸಿದ್ದ ಈ ಪ್ರಥಮ ದತ್ತಿ ಉಪನ್ಯಾಸ ಸರಣಿಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ದೇವದುರ್ಗ ವಿಸ್ತರಣಾ ಕೇಂದ್ರದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗೋವರ್ಧನ ಉದ್ಘಾಟಿಸಿದರು.

ತಂದೆ-ತಾಯಿಯ ಆದರ್ಶಗಳು ಹಾಗೂ ಅವರು ಕಂಡ ಸಮಾಜಮುಖಿ ಕನಸುಗಳು ಇಂತಹ ಅರ್ಥಪೂರ್ಣ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರೇರಣೆಯಾಗಿವೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದ ಮಾತನಾಡಿ, ವಿಜಯನಗರ ಕಾಲದ ಸಾಹಿತ್ಯ ಮತ್ತು ಶಾಸನಗಳು ಅಂದಿನ ಶ್ರೀಮಂತ ಸಂಸ್ಕೃತಿ, ಜನಜೀವನ ಹಾಗೂ ನಗರ ಬದುಕಿನ ವೈಭವವನ್ನು ತಿಳಿಸುತ್ತವೆ. ಇಂತಹ ಐತಿಹಾಸಿಕ ಆಕರಗಳ ಅಧ್ಯಯನವು ಯುವಪೀಳಿಗೆಯಲ್ಲಿ ಚರಿತ್ರೆಯ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದರು.

ಇತಿಹಾಸ ಸಂಶೋಧನೆಗೆ ಎಐ ತಂತ್ರಜ್ಞಾನದ ನೆರವು :

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಖನಿಜ ಸಂಸ್ಕರಣೆ ವಿಭಾಗದ ಪ್ರಾಧ್ಯಾಪಕ ಪ್ರೊ. ಎಸ್.ಎಂ. ಶಶಿಧರ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (ಎಐ) ಇತಿಹಾಸ ಸಂಶೋಧನೆಗೆ ಹೊಸ ಸಾಧ್ಯತೆಗಳನ್ನು ತೆರೆದಿವೆ. ಹಳೆಯ ಶಾಸನಗಳು, ತಾಳೆಗರಿಗಳು ಹಾಗೂ ಅಸ್ಪಷ್ಟವಾಗಿರುವ ಪ್ರಾಚೀನ ಲಿಪಿಗಳನ್ನು ವಿಶ್ಲೇಷಿಸಲು ಎಐ ತಂತ್ರಜ್ಞಾನ ನೆರವಾಗುತ್ತಿದೆ. ಇದರಿಂದ ಚಾರಿತ್ರಿಕ ಆಕರಗಳ ಅಧ್ಯಯನವನ್ನು ಇನ್ನಷ್ಟು ಸುಲಭವಾಗಿ ಮತ್ತು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಇತಿಹಾಸ ಮತ್ತು ಪುರಾತತ್ತ್ವ ಅಧ್ಯಯನ ವಿಭಾಗದ ಉಪನ್ಯಾಸಕರಾದ ಡಾ. ನರಸಿಂಹಮೂರ್ತಿ ಟಿ.ಎಸ್., ಡಾ. ವಿರೂಪಾಕ್ಷಪ್ಪ ಎಂ. ಹಾಗೂ ಕನ್ನಡ ವಿಭಾಗದ ಅಧ್ಯಾಪಕರಾದ ಡಾ. ಮಲ್ಲಯ್ಯ ಸಂಡೂರು, ಡಾ. ಗುಡ್ಡಪ್ಪ ಮತ್ತು ಡಾ. ರೇಣುಕಾ ಪೂಜಾರಿ ಉಪಸ್ಥಿತರಿದ್ದರು.

ಕು. ಜ್ಯೋತಿ ಪ್ರಾರ್ಥಿಸಿದರು. ಕರಿಬಸವರಾಜ ಸ್ವಾಗತಿಸಿದರು. ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು. ಡಿ.ಎಸ್. ಮಂಜುನಾಥ್ ವಂದನಾರ್ಪಣೆ ಸಲ್ಲಿಸಿದರು. ಇತಿಹಾಸ ಮತ್ತು ಕನ್ನಡ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

vijayanagaraBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X