Ballari | ವ್ಯಕ್ತಿ ನಾಪತ್ತೆ : ಪತ್ತೆಗೆ ಪೊಲೀಸರ ಮನವಿ

ಬಳ್ಳಾರಿ : ಕುಡುತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 23ರಂದು ಮನೆಯಿಂದ ಬಜಾರ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವ್ಯಕ್ತಿಯೊಬ್ಬರು ಇದುವರೆಗೆ ಮನೆಗೆ ಮರಳದ ಹಿನ್ನೆಲೆ ನಾಪತ್ತೆ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರಿಂದ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಾಪತ್ತೆಯಾದ ವ್ಯಕ್ತಿಯನ್ನು ರಾಜೇಶ್ (32) ಎಂದು ಗುರುತಿಸಲಾಗಿದ್ದು, ಅವರು ರಾಮಚಂದ್ರಪ್ಪ ಅವರ ಪುತ್ರರಾಗಿದ್ದಾರೆ. ಜಿಂದಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು ಪ್ರಸ್ತುತ ಕುಡುತಿನಿ ಪಟ್ಟಣದಲ್ಲಿ ವಾಸವಾಗಿದ್ದು, ಮೂಲತಃ ವಿಜಯನಗರ ಜಿಲ್ಲೆಯ ಹೊಸಪೇಟೆ ಟೌನ್‌ನ ರಾಣೀಪೇಟೆ ನಿವಾಸಿಯಾಗಿದ್ದಾರೆ.
ರಾಜೇಶ್ ಅವರ ಎತ್ತರ ಸುಮಾರು 5.2 ಅಡಿ ಇದ್ದು, ತೆಳ್ಳನೆಯ ಮೈಕಟ್ಟು, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದಾರೆ. ಸ್ವಲ್ಪ ಗಡ್ಡ ಬಿಟ್ಟಿರುತ್ತಾರೆ. ಮನೆ ಬಿಟ್ಟು ತೆರಳುವಾಗ ತಿಳಿ ಹಳದಿ ಬಣ್ಣದ ಟಿ-ಶರ್ಟ್ ಹಾಗೂ ಡಾರ್ಕ್ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಕುಡುತಿನಿ ಪೊಲೀಸ್ ಠಾಣೆ ಮೊಬೈಲ್ ಸಂಖ್ಯೆ 9480803078, ತೋರಣಗಲ್ಲು ಡಿವೈಎಸ್‌ಪಿ ಕಚೇರಿ 9480803010 ಅಥವಾ ಕುರುಗೋಡು ವೃತ್ತದ ಸಿ.ಪಿ.ಐ 9480803039 ಸಂಖ್ಯೆಗೆ ಸಂಪರ್ಕಿಸಲು ಪೊಲೀಸ್ ಉಪನಿರೀಕ್ಷಕರು ಮನವಿ ಮಾಡಿದ್ದಾರೆ.






