Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ತುಂಗಭದ್ರಾ ಕೆಳಮಟ್ಟದ...

Ballari | ತುಂಗಭದ್ರಾ ಕೆಳಮಟ್ಟದ ಕಾಲುವೆಗೆ ಪೂರ್ಣ ಪ್ರಮಾಣದ ನೀರು ಹರಿಸಲು ಶಾಸಕ ಗಣೇಶ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Aug 2026 8:55 PM IST
share
Ballari  | ತುಂಗಭದ್ರಾ ಕೆಳಮಟ್ಟದ ಕಾಲುವೆಗೆ ಪೂರ್ಣ ಪ್ರಮಾಣದ ನೀರು ಹರಿಸಲು ಶಾಸಕ ಗಣೇಶ್ ಆಗ್ರಹ

ಬಳ್ಳಾರಿ/ಕಂಪ್ಲಿ: ತುಂಗಭದ್ರಾ ಜಲಾಶಯದ ಬಲದಂಡೆ ಕೆಳಮಟ್ಟದ ಕಾಲುವೆಗೆ ಬಚಾವತ್ ಆಯೋಗದ ಹಂಚಿಕೆಯಂತೆ ಪೂರ್ಣ ಪ್ರಮಾಣದ ನೀರು ಹರಿಸಿದರೆ ಮಾತ್ರ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಎಂದು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಮಾತನಾಡಿದ ಅವರು, ಆ.11ರಂದು ಮುನಿರಾಬಾದ್‌ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕರ್ನಾಟಕದ ಕೋಟಾದ 750 ಕ್ಯೂಸೆಕ್ ಹಾಗೂ ಆಂಧ್ರಪ್ರದೇಶದ ಕೋಟಾದ 750 ಕ್ಯೂಸೆಕ್ ನೀರನ್ನು ಕಾಲುವೆಗೆ ಹರಿಸುವ ಕುರಿತು ಚರ್ಚಿಸಲಾಗಿತ್ತು. ಆದರೆ, ಆಂಧ್ರಪ್ರದೇಶದ ಕೋಟಾದ ನೀರನ್ನು ಪಡೆಯದ ಹಿನ್ನೆಲೆಯಲ್ಲಿ ಕೇವಲ ಕರ್ನಾಟಕದ ಪಾಲಿನ 750 ಕ್ಯೂಸೆಕ್ ನೀರು ಮಾತ್ರ ಹರಿಯುತ್ತಿದೆ. ಇದರಿಂದ ರೈತರಿಗೆ ಅಗತ್ಯ ಪ್ರಮಾಣದ ನೀರು ದೊರೆಯುತ್ತಿಲ್ಲ ಎಂದು ಹೇಳಿದರು.

ತಮ್ಮ ಕ್ಷೇತ್ರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ರೈತರು ಈಗಾಗಲೇ ಭತ್ತದ ಸಸಿ ಮಡಿಗಳನ್ನು ಸಿದ್ಧಪಡಿಸಿದ್ದು, ಕೆಲವೆಡೆ ನಾಟಿ ಕಾರ್ಯವೂ ಆರಂಭವಾಗಿದೆ. ಹೀಗಾಗಿ ಕೂಡಲೇ ಎರಡೂ ರಾಜ್ಯಗಳ ಪಾಲಿನ ನೀರನ್ನು ಕಾಲುವೆಗೆ ಹರಿಸಿದರೆ ನಾಲ್ಕು ತಾಲ್ಲೂಕುಗಳ ರೈತರಿಗೆ ಅನುಕೂಲವಾಗಲಿದೆ. ನೀರು ಸಿಗದಿದ್ದರೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆದ್ದರಿಂದ ಆಂಧ್ರಪ್ರದೇಶದ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಕೂಡಲೇ ಕಾಲುವೆಗೆ ಪೂರ್ಣ ಪ್ರಮಾಣದ ನೀರು ಹರಿಸುವಂತೆ ಹಾಗೂ ತುಂಗಭದ್ರಾ ನದಿಗೆ 500 ಕ್ಯೂಸೆಕ್ ನೀರು ಬಿಡುವಂತೆ ಶಾಸಕ ಗಣೇಶ್ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ, ಕಳೆದ ಮೂರು ದಿನಗಳಿಂದ ಶಾಸಕ ಗಣೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮೊಂದಿಗೆ ನೀರಿನ ಸಮಸ್ಯೆ ಕುರಿತು ಚರ್ಚಿಸಿದ್ದಾರೆ. ತಾವು ಈಗಾಗಲೇ ಆಂಧ್ರಪ್ರದೇಶದ ನೀರಾವರಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಅವರೂ ಅಲ್ಲಿನ ಸಚಿವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿಸಿದರು.

ಎರಡೂ ರಾಜ್ಯಗಳ ಪಾಲಿನ ನೀರನ್ನು ಒಟ್ಟಿಗೆ ಹರಿಸಲು ಆಂಧ್ರಪ್ರದೇಶದ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೆರಡು–ಮೂರು ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Tags

TungabhadraBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X