Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಖಬರುಸ್ತಾನ್‌ಗೆ ರಸ್ತೆ,...

Ballari | ಖಬರುಸ್ತಾನ್‌ಗೆ ರಸ್ತೆ, ಮೂಲಸೌಕರ್ಯ ಕಲ್ಪಿಸಲು ಶಾಸಕ ಜೆ.ಎನ್.ಗಣೇಶ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ1 Sept 2026 7:40 PM IST
share
Ballari | ಖಬರುಸ್ತಾನ್‌ಗೆ ರಸ್ತೆ, ಮೂಲಸೌಕರ್ಯ ಕಲ್ಪಿಸಲು ಶಾಸಕ ಜೆ.ಎನ್.ಗಣೇಶ್ ಭರವಸೆ

ಬಳ್ಳಾರಿ/ಕಂಪ್ಲಿ: ತಾಲೂಕಿನ ನಂ.10 ಮುದ್ದಾಪುರ ಗ್ರಾಪಂ ವ್ಯಾಪ್ತಿಯ ಬೆಳಗೋಡ್‌ಹಾಳ್ ಗ್ರಾಮದ ಮುಸ್ಲಿಂ ಸಮಾಜದ ಖಬರುಸ್ತಾನ್ (ಸ್ಮಶಾನ) ಸ್ಥಳಕ್ಕೆ ಶಾಸಕ ಜೆ.ಎನ್. ಗಣೇಶ್ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯುವ ಮುಖಂಡ ಹಾಗೂ ಕಂಪ್ಲಿ ತಾಲೂಕು ಮಾನವ ಬಂಧುತ್ವ ಅಧ್ಯಕ್ಷ ಬಿ.ನಬೀಸಾಬ್ ಅವರು, ಖಬರುಸ್ತಾನ್‌ಗೆ ತೆರಳಲು ಸಮರ್ಪಕ ರಸ್ತೆ ಇಲ್ಲದಿರುವುದರಿಂದ ತೊಂದರೆಯಾಗುತ್ತಿದೆ ಎಂದು ಶಾಸಕರ ಗಮನಕ್ಕೆ ತಂದರು. ಕಿರಿದಾದ ರಸ್ತೆಯಲ್ಲಿ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಕೊಂಡೊಯ್ಯಲು ಸಮಸ್ಯೆಯಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಕಿರಿದಾದ ಮಣ್ಣಿನ ದಾರಿ, ಎರಡೂ ಬದಿಯ ಹಸಿರು ಭತ್ತದ ಗದ್ದೆಗಳು ಹಾಗೂ ದಾರಿಯ ಕೊನೆಯಲ್ಲಿ ಅರ್ಧ ನಿರ್ಮಾಣಗೊಂಡ ಕಾಂಪೌಂಡ್ ಗೋಡೆಯಿರುವ ಖಬರುಸ್ತಾನ್‌ನ ಸಮಸ್ಯೆಯ ಗಂಭೀರತೆಯನ್ನು ವಿವರಿಸಿದರು.

ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ಮನುಷ್ಯನ ಅಂತಿಮ ಶವಯಾತ್ರೆಯನ್ನು ಗೌರವದಿಂದ ಕಳುಹಿಸಿಕೊಡುವುದು ನಮ್ಮ ಕರ್ತವ್ಯ. ಇದು ಭಾವನಾತ್ಮಕ ಹಾಗೂ ಮಾನವೀಯತೆಯ ಪ್ರತೀಕವಾಗಿದೆ. ಇಲ್ಲಿನ ಖಬರುಸ್ತಾನ್ (ಸ್ಮಶಾನ)ವನ್ನು ಅಭಿವೃದ್ಧಿಪಡಿಸುವ ಜೊತೆಗೆ ಕಿರಿದಾದ ರಸ್ತೆಯನ್ನು ಅಗಲೀಕರಣಗೊಳಿಸಿ, ಗುಣಮಟ್ಟದ ರಸ್ತೆ ನಿರ್ಮಿಸುವ ಮೂಲಕ ಶವಯಾತ್ರೆಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಮುಸ್ಲಿಂ ಸಮಾಜದ ಏಳಿಗೆಯ ಜೊತೆಗೆ ಪ್ರತಿಯೊಂದು ಹಂತದಲ್ಲೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ಮುಖಂಡರಾದ ಪೇಂಟರ್ ಮಸ್ತಾನ್, ಸಿ.ಆರ್.ಹನುಮಂತ, ಕೆ.ಷಣ್ಮುಕಪ್ಪ, ಜಾಫರ್, ವರದಿ ಶಬ್ಬೀರ್, ಹೊನ್ನೂರವಲಿ, ಗೂಡುಸಾಬ್, ರಾಜಾಭಕ್ಷಿ, ಪೀರಸಾಬ್, ಲೋಕರಾಜ, ಶರಣಗೌಡ, ಖಾಜಾ ಹುಸೇನ್, ನೂರ್‌ಬಾಷಾ ಸೇರಿದಂತೆ ಇತರರು ಇದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X