Ballari | ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರವೇಶ ಪರೀಕ್ಷೆ

ಬಳ್ಳಾರಿ / ಕಂಪ್ಲಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಭಾನುವಾರ ಪರೀಕ್ಷೆ ಶಾಂತಿಯುತವಾಗಿ ನಡೆಯಿತು.
ತಾಲೂಕಿನಲ್ಲಿ ನಡೆದ ಈ ಪ್ರವೇಶ ಪರೀಕ್ಷೆಗೆ 96 ವಿದ್ಯಾರ್ಥಿಗಳಲ್ಲಿ 85 ಮಂದಿ ಹಾಜರಾಗಿದ್ದು, 11 ಮಂದಿ ಗೈರುಹಾಜರಾಗಿದ್ದಾರೆ ಎಂದು ಪ್ರಾಂಶುಪಾಲ ಬಸವರಾಜ್ ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು, ಯಾವುದೇ ಅಡಚಣೆಗಳಿಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆದಿತು ಎಂದು ಅಧಿಕಾರಿಗಳು ತಿಳಿಸಿದರು.
ಫಲಿತಾಂಶ ಶೀಘ್ರದಲ್ಲೇ ಪ್ರಕಟ
ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ dom.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.
ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಮೀಸಲಾತಿ ನಿಯಮಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಸಮವಸ್ತ್ರ, ಪಠ್ಯಪುಸ್ತಕಗಳು ಸೇರಿದಂತೆ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ನೀಡಲಾಗುತ್ತದೆ.







