Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ವಿಶೇಷ ಚೇತನರಿಗೆ 21 ಲಕ್ಷ...

Ballari | ವಿಶೇಷ ಚೇತನರಿಗೆ 21 ಲಕ್ಷ ರೂ. ವೆಚ್ಚದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ29 Oct 2026 7:51 PM IST
share
Ballari | ವಿಶೇಷ ಚೇತನರಿಗೆ 21 ಲಕ್ಷ ರೂ. ವೆಚ್ಚದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ

ಸಂಡೂರು/ಬಳ್ಳಾರಿ: ವಿಶೇಷ ಚೇತನರು ಯಾರ ಸಹಾಯವನ್ನೂ ಅವಲಂಬಿಸದೆ ಸ್ವಾಭಿಮಾನದಿಂದ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ಉದ್ದೇಶದಿಂದ ಸಂಸದ ಈ. ತುಕಾರಾಂ ಅವರ ಅನುದಾನದಡಿ 20 ವಿಶೇಷ ಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಸಂಡೂರು ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಈ. ತುಕಾರಾಂ ಹಾಗೂ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಈ. ತುಕಾರಾಂ ಅವರು ಫಲಾನುಭವಿಗಳಿಗೆ ವಾಹನಗಳನ್ನು ಹಸ್ತಾಂತರಿಸಿದರು. ಒಟ್ಟು 21 ಲಕ್ಷ ರೂ. ವೆಚ್ಚದಲ್ಲಿ ಈ ವಾಹನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಈ. ತುಕಾರಾಂ, ವಿಶೇಷ ಚೇತನರು ಸಮಾಜದಲ್ಲಿ ಎಲ್ಲರಂತೆ ಸ್ವಾಭಿಮಾನದಿಂದ ಬದುಕಬೇಕು. ತಮ್ಮ ದೈನಂದಿನ ಚಟುವಟಿಕೆಗಳನ್ನು ಸ್ವತಂತ್ರವಾಗಿ ನಿರ್ವಹಿಸಲು ಯಂತ್ರಚಾಲಿತ ತ್ರಿಚಕ್ರ ವಾಹನಗಳು ಸಹಕಾರಿಯಾಗಲಿವೆ. ಫಲಾನುಭವಿಗಳು ವಾಹನಗಳನ್ನು ಜೋಪಾನವಾಗಿ ಕಾಪಾಡಿಕೊಂಡು ಸದುಪಯೋಗಪಡಿಸಿಕೊಳ್ಳಬೇಕು. ವಾಹನಗಳ ಬಿಡಿಭಾಗಗಳನ್ನು ತೆಗೆದು ಮಾರಾಟ ಮಾಡುವಂತಹ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ದೊರೆಯಬೇಕು ಎಂಬ ಆಶಯದೊಂದಿಗೆ ವಿಶೇಷ ಚೇತನರ ಕಲ್ಯಾಣ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಹಾಗೂ ಸ್ವಾವಲಂಬಿ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಇಂತಹ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಸಂಡೂರು ಪುರಸಭೆ, ಬಸ್ ನಿಲ್ದಾಣ, ಮಿನಿ ವಿಧಾನಸೌಧ ಹಾಗೂ ನೌಕರರ ಭವನಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಶೀಘ್ರದಲ್ಲೇ ಉತ್ತರ ನೀಡುವುದಾಗಿ ಸಂಸದರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕಿ ಅನ್ನಪೂರ್ಣ ಈ. ತುಕಾರಾಂ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಸಿಡಿಪಿಒ ನಾಗರಾಜ್, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ನೂರುದ್ದೀನ್, ಮಾಜಿ ಪುರಸಭೆ ಅಧ್ಯಕ್ಷ ಸಿರಾಜ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X