Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಸಫಾಯಿ ಮಿತ್ರರಿಗೆ ಔದ್ಯೋಗಿಕ...

Ballari | ಸಫಾಯಿ ಮಿತ್ರರಿಗೆ ಔದ್ಯೋಗಿಕ ಸುರಕ್ಷತಾ ತರಬೇತಿ

ವಾರ್ತಾಭಾರತಿವಾರ್ತಾಭಾರತಿ30 Sept 2026 8:11 PM IST
share
Ballari | ಸಫಾಯಿ ಮಿತ್ರರಿಗೆ ಔದ್ಯೋಗಿಕ ಸುರಕ್ಷತಾ ತರಬೇತಿ

ಸಂಡೂರು/ಬಳ್ಳಾರಿ: ಸ್ವಚ್ಛತಾ ಹಿ ಸೇವಾ–2026ರ ಅಂಗವಾಗಿ ಸಂಡೂರು ಪುರಸಭೆ ವತಿಯಿಂದ ಸಫಾಯಿ ಮಿತ್ರ ಸುರಕ್ಷಾ ಶಿಬಿರ ಆಯೋಜಿಸಿ, ಪೌರಕಾರ್ಮಿಕರು ಹಾಗೂ NAMASTE ಯೋಜನೆಯಡಿ ನೋಂದಾಯಿಸಲ್ಪಟ್ಟ ತ್ಯಾಜ್ಯ ಸಂಗ್ರಹಕಾರರಿಗೆ ಔದ್ಯೋಗಿಕ ಸುರಕ್ಷತಾ ತರಬೇತಿ ನೀಡಲಾಯಿತು.

ಸಂಡೂರು ಪುರಸಭೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲಸದ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು, ವೈಯಕ್ತಿಕ ಸುರಕ್ಷತಾ ಪರಿಕರಗಳ (PPE) ಬಳಕೆ ಹಾಗೂ ಅವುಗಳ ಮಹತ್ವದ ಕುರಿತು ತರಬೇತಿ ನೀಡಲಾಯಿತು. ದಾವಣಗೆರೆಯ ಹಸಿರು ದಳ ಎನ್‌ಜಿಒದ ಜಿ.ವಿ. ಕಿರಣ್ ಹಾಗೂ ಜಿಲಾನಿ ಅವರು ತರಬೇತಿ ನೀಡಿದರು.

ಕೆಲಸದ ಸ್ವರೂಪಕ್ಕೆ ಅನುಗುಣವಾಗಿ PPE ಕಿಟ್‌ಗಳನ್ನು ಸರಿಯಾಗಿ ಬಳಸುವುದರಿಂದ ಕೆಲಸದ ವೇಳೆ ಎದುರಾಗಬಹುದಾದ ಅಪಾಯಗಳು ಹಾಗೂ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸುರಕ್ಷಿತವಾಗಿರಲು ಸಾಧ್ಯವಾಗುತ್ತದೆ ಎಂದು ತರಬೇತುದಾರರು ತಿಳಿಸಿದರು. ಈ ಸಂದರ್ಭದಲ್ಲಿ PPE ಕಿಟ್‌ಗಳ ಬಳಕೆಯ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಲಾಯಿತು.

NAMASTE ಯೋಜನೆಯಡಿ ನೋಂದಾಯಿಸಲ್ಪಟ್ಟ 53 ತ್ಯಾಜ್ಯ ಸಂಗ್ರಹಕಾರರಿಗೆ ಗುರುತಿನ ಚೀಟಿ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಿಸಲಾಯಿತು. ಜೊತೆಗೆ PPE ಕಿಟ್‌ಗಳನ್ನು ವಿತರಿಸಿ, ಅವುಗಳ ಸರಿಯಾದ ಬಳಕೆಯ ಕುರಿತು ಮಾಹಿತಿ ನೀಡಲಾಯಿತು.

ತ್ಯಾಜ್ಯ ಸಂಗ್ರಹಕಾರರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಯಲ್ಲಿರುವ ಮತ್ತು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು. ಸಬ್ಸಿಡಿ ಆಧಾರದ ಮೇಲೆ ವಾಹನ ಖರೀದಿ ಸೌಲಭ್ಯ, ತ್ಯಾಜ್ಯ ಸಂಗ್ರಹಕಾರರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ ಹಾಗೂ ತ್ಯಾಜ್ಯ ನಿರ್ವಹಣಾ ಕಾರ್ಯದಲ್ಲಿ ಪುರಸಭೆಯೊಂದಿಗೆ ನೇರ ಒಪ್ಪಂದ (MoU) ಮಾಡಿಕೊಳ್ಳುವ ಅವಕಾಶಗಳ ಕುರಿತು ವಿವರಿಸಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ, ಪರಿಸರ ಅಭಿಯಂತರರಾದ ಅನ್ನಪೂರ್ಣ, ಆರೋಗ್ಯ ನಿರೀಕ್ಷಕಿ ಶಿವರಂಜಿನಿ, ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರಾದ ಶೇಖರ್, ಹುಲಿಗೇಶ, ಮಾರೆಶ್, ಹೆಚ್. ಮಲ್ಲ, ಮಲ್ಲಿಕಾರ್ಜುನ, ದೇವಣ್ಣ, ಸಕ್ಷನ್ ಮಷಿನ್ ಆಪರೇಟರ್ ತಿಮ್ಮಾರೆಡ್ಡಿ, 53 ಮಂದಿ ತ್ಯಾಜ್ಯ ಸಂಗ್ರಹಕಾರರು, ನೈರ್ಮಲ್ಯ ಮೇಲ್ವಿಚಾರಕರಾದ ಶಾಂತ, ವಿಜಯ್, ಕಿರಣ್, ಕಮ್ಯೂನಿಟಿ ಮೊಬೈಲೈಸರ್‌ಗಳಾದ ಕಾವ್ಯಾಂಜಲಿ, ಚೈತ್ರ, ಮಾರೆಕ್ಕ, ದೀನಾ, ಅನಿತಾ ಸೇರಿದಂತೆ ಶಿಕ್ಷಕರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X