Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕಂಪ್ಲಿಯಲ್ಲಿ ಪೆಟ್ರೋಲ್ ಬಂಕ್...

Ballari | ಕಂಪ್ಲಿಯಲ್ಲಿ ಪೆಟ್ರೋಲ್ ಬಂಕ್ ಬಂದ್ : ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 May 2026 7:45 PM IST
share
Ballari | ಕಂಪ್ಲಿಯಲ್ಲಿ ಪೆಟ್ರೋಲ್ ಬಂಕ್ ಬಂದ್ : ಸಾರ್ವಜನಿಕರ ಆಕ್ರೋಶ

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ನಡುವೆ ಕಂಪ್ಲಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಪೆಟ್ರೋಲ್ ಬಂಕ್‌ಗಳು ಅಚಾನಕವಾಗಿ ಬಂದ್ ಆಗಿರುವುದು ಸಾರ್ವಜನಿಕರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಕಂಪ್ಲಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ ಕೆಲವು ಪ್ರಮುಖ ಪೆಟ್ರೋಲ್ ಬಂಕ್‌ಗಳು ದಿನಪೂರ್ತಿ ಕಾರ್ಯನಿರ್ವಹಿಸದೇ ಬಂದ್ ಆಗಿದ್ದರಿಂದ ವಾಹನ ಸವಾರರು ಇಂಧನಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಭಾರತ್ ಪೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಸಂಸ್ಥೆಗಳ ಬಂಕ್‌ಗಳು ಬಂದ್ ಆಗಿರುವುದು ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ತಾಲೂಕಿನ ಗುತ್ತಿಗನೂರು ಸಮೀಪದ ಪೆಟ್ರೋಲ್ ಬಂಕ್ ಕೂಡ ಕಾರ್ಯನಿರ್ವಹಿಸದೇ ಬಂದ್ ಆಗಿದ್ದರಿಂದ ಗ್ರಾಮೀಣ ಭಾಗದ ಜನರು ಸಂಕಷ್ಟ ಅನುಭವಿಸಿದರು. ದೂರ ಪ್ರಯಾಣಕ್ಕೆ ಹೊರಟಿದ್ದ ವಾಹನ ಸವಾರರು ಹಲವಾರು ಕಿಲೋಮೀಟರ್ ದೂರದ ಬಂಕ್‌ಗಳಿಗೆ ತೆರಳಿ ಇಂಧನ ಪಡೆಯಬೇಕಾದ ಪರಿಸ್ಥಿತಿ ಎದುರಾಯಿತು.

ಸ್ಥಳೀಯರ ಆರೋಪದ ಪ್ರಕಾರ, ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹ ಇದ್ದರೂ ಸಾರ್ವಜನಿಕರಿಗೆ ವಿತರಣೆ ಮಾಡಲಾಗುತ್ತಿಲ್ಲ. ತೈಲ ದರ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಲ್ಲಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇಂಧನ ದರ ಏರಿಕೆಯಿಂದ ಈಗಾಗಲೇ ಸಾರಿಗೆ ವೆಚ್ಚ, ಅಗತ್ಯ ವಸ್ತುಗಳ ಬೆಲೆ, ರೈತರು ಮತ್ತು ಸಣ್ಣ ವ್ಯಾಪಾರಿಗಳ ಮೇಲಿನ ಹೊರೆ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ಬಂಕ್ ಬಂದ್ ಆಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

“ಬಂಕ್‌ನಲ್ಲಿ ಇಂಧನ ಇದ್ದರೂ ನೀಡುತ್ತಿಲ್ಲ. ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಪರಿಶೀಲನೆ ನಡೆಸಬೇಕು” ಎಂದು ವಾಹನ ಸವಾರರು ಒತ್ತಾಯಿಸಿದ್ದಾರೆ.

ಅತ್ಯಾವಶ್ಯಕ ಸೇವೆಗಳಿಗೆ ತೆರಳುವ ಜನರು, ಆಟೋ ಚಾಲಕರು, ರೈತರು ಹಾಗೂ ಸಣ್ಣ ವ್ಯಾಪಾರಿಗಳು ಇಂಧನ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೆಲವು ಕಡೆಗಳಲ್ಲಿ ವಾಹನಗಳ ಉದ್ದ ಸಾಲುಗಳು ಕಂಡುಬಂದಿವೆ. ಇನ್ನೂ ಕೆಲವು ಬಂಕ್‌ಗಳಲ್ಲಿ “ಇಂಧನ ಇಲ್ಲ” ಎಂಬ ಫಲಕ ಅಳವಡಿಸಲಾಗಿತ್ತು.

ಜಿಲ್ಲಾಡಳಿತ ತಕ್ಷಣ ಗಮನಹರಿಸಿ ಕೃತಕ ಅಭಾವ ಸೃಷ್ಟಿಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಸಾರ್ವಜನಿಕರಿಗೆ ನಿರಂತರ ಇಂಧನ ಪೂರೈಕೆ ಖಚಿತಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X