Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಬರ ಪರಿಹಾರವಾಗಿ ರೈತರಿಗೆ ...

Ballari | ಬರ ಪರಿಹಾರವಾಗಿ ರೈತರಿಗೆ ಎಕರೆಗೆ 30 ಸಾವಿರ ರೂ. ನೀಡಲು ರಾಜುನಾಯಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Sept 2026 6:17 PM IST
share
Ballari | ಬರ ಪರಿಹಾರವಾಗಿ ರೈತರಿಗೆ  ಎಕರೆಗೆ 30 ಸಾವಿರ ರೂ. ನೀಡಲು ರಾಜುನಾಯಕ ಆಗ್ರಹ

ಬಳ್ಳಾರಿ/ಕಂಪ್ಲಿ: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ ಕಾಂಗ್ರೆಸ್ ಸರ್ಕಾರ ರೈತರಿಗೆ ಸಮರ್ಪಕ ಪರಿಹಾರ ನೀಡಲು ಮುಂದಾಗಿಲ್ಲ. ಕೂಡಲೇ ಬರಪೀಡಿತ ರೈತರಿಗೆ ಎಕರೆಗೆ 30 ಸಾವಿರ ರೂ. ಪರಿಹಾರ ನೀಡುವುದರ ಜೊತೆಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಆಗ್ರಹಿಸಿದರು.

ಪಟ್ಟಣದ ಅತಿಥಿಗೃಹದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಪ್ಲಿ ತಾಲೂಕು ಸೇರಿದಂತೆ ರಾಜ್ಯದ ಬಹುತೇಕ ತಾಲೂಕುಗಳು ಬರಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿರುವುದಷ್ಟೇ ಹೊರತು ರೈತರಿಗೆ ಅಗತ್ಯ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.

ರೈತರ ಪರವಾಗಿ ಮಾತನಾಡುವುದಷ್ಟೇ ಸಾಲದು, ಅವರ ಸಂಕಷ್ಟದಲ್ಲಿ ಭಾಗಿಯಾಗಿ ಸೂಕ್ತ ಪರಿಹಾರ ನೀಡಿದಾಗ ಮಾತ್ರ ರೈತರ ಬದುಕು ಸುಧಾರಿಸುತ್ತದೆ ಎಂದು ಹೇಳಿದರು.

ಕಂಪ್ಲಿಯಲ್ಲಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧ ಕಳಪೆ ಕಾಮಗಾರಿಯಿಂದ ಕೂಡಿದ್ದು, ಬಸಿ ನೀರು ಬರುವ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಗುಣಮಟ್ಟದ ಕೊರತೆಯಿಂದ ಕಟ್ಟಡ ದೀರ್ಘಕಾಲ ಬಾಳಿಕೆ ಬರುವುದಿಲ್ಲ ಎಂದು ಆರೋಪಿಸಿದರು.

ಕಾಮಗಾರಿ ಪೂರ್ಣಗೊಂಡು ಹಲವು ವರ್ಷಗಳಾದರೂ ಮಿನಿ ವಿಧಾನಸೌಧ ಹಾಗೂ ಅತಿಥಿಗೃಹದ ಹೊಸ ಕಟ್ಟಡವನ್ನು ಉದ್ಘಾಟಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಿದರು.

ಕಂಪ್ಲಿ ಭಾಗದ ಬಹುವರ್ಷಗಳ ಬೇಡಿಕೆಯಾಗಿರುವ ಹೊಸ ಸೇತುವೆ ನಿರ್ಮಾಣಕ್ಕೂ ಸರ್ಕಾರ ವಿಳಂಬ ಮಾಡುತ್ತಿದೆ. ಡಿಪಿಆರ್ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಪ್ರತಿ ವರ್ಷ ಪ್ರವಾಹದಿಂದ ಹಳೆಯ ಸೇತುವೆ ಮುಳುಗಿ ಸಂಚಾರಕ್ಕೆ ತೊಂದರೆಯಾಗುತ್ತಿರುವುದರಿಂದ ಹೊಸ ಸೇತುವೆ ನಿರ್ಮಾಣಕ್ಕೆ ಕೂಡಲೇ ಅಡಿಗಲ್ಲು ಹಾಕಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಬಳ್ಳಾರಿ ನಗರ ಘಟಕದ ಅಧ್ಯಕ್ಷ ಹೊನ್ನೂರಸ್ವಾಮಿ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ವಸಂತಕುಮಾರ, ಕಂಪ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹೆಚ್. ಮೇಘರಾಜ್, ಪ್ರಧಾನ ಕಾರ್ಯದರ್ಶಿ ಜಗದೀಶ ಪೂಜಾರ, ನಗರ ಘಟಕದ ಅಧ್ಯಕ್ಷ ಇರ್ಫಾನ್ ಗುತ್ತಿ, ಮುಖಂಡರಾದ ಮಂಜುನಾಥ ಕುಕನೂರು, ಹಳ್ಳಿಗುಡಿ ಹನುಮಂತಪ್ಪ, ಬೇವೂರು ಈರಣ್ಣ, ವಿರುಪಾಕ್ಷಿ, ನಿಂಗಪ್ಪ, ವಿರೇಶ್, ರಾಜೇಶ್, ಸಂಗೇಶ್, ಕೊಂಡಯ್ಯ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

farmersdroughtBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X