Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಹೆಚ್ಚುವರಿ ಕೆಲಸದಿಂದ ಮುಕ್ತಿ...

Ballari | ಹೆಚ್ಚುವರಿ ಕೆಲಸದಿಂದ ಮುಕ್ತಿ ನೀಡಿ, ಅಂಗನವಾಡಿ ನೌಕರರನ್ನು ಖಾಯಂಗೊಳಿಸಿ: ವರಲಕ್ಷ್ಮೀ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Sept 2026 9:23 PM IST
share
Ballari | ಹೆಚ್ಚುವರಿ ಕೆಲಸದಿಂದ ಮುಕ್ತಿ ನೀಡಿ, ಅಂಗನವಾಡಿ ನೌಕರರನ್ನು ಖಾಯಂಗೊಳಿಸಿ: ವರಲಕ್ಷ್ಮೀ ಆಗ್ರಹ

ಬಳ್ಳಾರಿ/ಕಂಪ್ಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಅನಗತ್ಯ ಹೆಚ್ಚುವರಿ ಕೆಲಸಗಳನ್ನು ನೀಡುವ ಮೂಲಕ ಅಂಗನವಾಡಿ ಕೇಂದ್ರಗಳ ಗುಣಮಟ್ಟವನ್ನು ಕುಗ್ಗಿಸುತ್ತಿವೆ. ಹೆಚ್ಚುವರಿ ಕೆಲಸದಿಂದ ಮುಕ್ತಿ ನೀಡಿ, ಅಂಗನವಾಡಿ ಕೇಂದ್ರಗಳಲ್ಲಿಯೇ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಹಾಗೂ ಬಹುಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮೀ ಆಗ್ರಹಿಸಿದರು.

ಪಟ್ಟಣದ ಶಿಬಿರದಿನ್ನಿ (ಮಾರುತಿ ನಗರ) ಪುರಸಭೆ ಸಮುದಾಯ ಭವನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಬಳ್ಳಾರಿ ಜಿಲ್ಲಾ 10ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಮಕ್ಕಳ ಪೌಷ್ಠಿಕತೆ, ಶಿಕ್ಷಣ ಮತ್ತು ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅಂಗನವಾಡಿ ನೌಕರರನ್ನು ಖಾಯಂಗೊಳಿಸಿ, ಕನಿಷ್ಠ ವೇತನದ ವ್ಯಾಪ್ತಿಗೆ ತರಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸಬೇಕು. ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ಮತ್ತು ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಒದಗಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಅಂಗನವಾಡಿ ಕೇಂದ್ರಗಳ ಮೂಲಭೂತ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗಿದ್ದು, ನೌಕರರ ಬೇಡಿಕೆಗಳ ಈಡೇರಿಕೆಗೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ಇದೇ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ದೆಹಲಿಯಲ್ಲಿ ನಡೆಯಲಿರುವ ‘ದೆಹಲಿ ಚಲೋ’ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದ ಅಂಗನವಾಡಿ ನೌಕರರು ಭಾಗವಹಿಸಲಿದ್ದಾರೆ ಎಂದು ವರಲಕ್ಷ್ಮೀ ತಿಳಿಸಿದರು.

ಸಮ್ಮೇಳನದಲ್ಲಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಸತ್ಯಬಾಬು, ಜಿಲ್ಲಾಧ್ಯಕ್ಷ ಹೆಚ್. ತಿಪ್ಪಯ್ಯ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಉಮಾದೇವಿ, ಕಾರ್ಯದರ್ಶಿ ಎ. ಮಲಮ್ಮ, ಹಮಾಲರ ಸಂಘದ ಅಧ್ಯಕ್ಷ ಓಬಳೇಶ, ಆಟೋ ರಿಕ್ಷಾ ಚಾಲಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಂತೋಷಕುಮಾರ, ಸಿಐಟಿಯು ಗೌರವಾಧ್ಯಕ್ಷ ಬಂಡಿ ಬಸವರಾಜ, ಕಂಪ್ಲಿ ತಾಲೂಕು ಅಧ್ಯಕ್ಷೆ ಬಿ.ಕೆ. ಉಮಾದೇವಿ, ಕಾರ್ಯದರ್ಶಿ ತಿಪ್ಪಮ್ಮ, ಖಜಾಂಜಿ ಅನುರಾದ, ಶಾಂತ, ಸಹ ಕಾರ್ಯದರ್ಶಿಗಳಾದ ನಾಜೀರಾ, ನಾಗಮ್ಮ, ಮುಖಂಡೆ ಜೈರಾಬೀ, ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಎಲ್. ಹೊನ್ನೂರಸಾಬ್, ನಾಗರಾಜ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X