Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಅಲ್ಪಸಂಖ್ಯಾತರ ವಾರ್ಡ್‌ಗಳ...

Ballari | ಅಲ್ಪಸಂಖ್ಯಾತರ ವಾರ್ಡ್‌ಗಳ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ: ಶಾಸಕ ನಾರಾ ಭರತ್ ರೆಡ್ಡಿ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ16 Nov 2026 11:19 PM IST
share
Ballari | ಅಲ್ಪಸಂಖ್ಯಾತರ ವಾರ್ಡ್‌ಗಳ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ನಗರದ ವಿವಿಧ ವಾರ್ಡ್‌ಗಳ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಮಂಜೂರು ಮಾಡಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಭರವಸೆ ನೀಡಿದರು.

ನಗರದ ರೂಪನಗುಡಿ ರಸ್ತೆಯ ಖಾಸಗಿ ಸಭಾಂಗಣದಲ್ಲಿ ಸೋಮವಾರ ಅಲ್ಪಸಂಖ್ಯಾತ ಸಮುದಾಯದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಮುಸ್ಲಿಂ ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಇದರಿಂದ ಬಡ ಕುಟುಂಬಗಳ ಶುಭ ಸಮಾರಂಭಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಮುದಾಯದ 7ರಿಂದ 8 ಮಂದಿಗೆ ಪಕ್ಷದ ಟಿಕೆಟ್ ಕೊಡಿಸಲು ಪ್ರಯತ್ನಿಸಲಾಗುವುದು. ಸಮಾಜಸೇವೆಯ ಆಸಕ್ತಿ ಹೊಂದಿರುವ ಯುವಕ-ಯುವತಿಯರು ರಾಜಕೀಯ ಪ್ರಾತಿನಿಧ್ಯ ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದರು.

ಮತದಾರರ ಹಕ್ಕುಗಳ ರಕ್ಷಣೆ ನನ್ನ ಆದ್ಯ ಕರ್ತವ್ಯವಾಗಿದೆ. ಮತದಾರರ ಪಟ್ಟಿಯಿಂದ ಮುಸ್ಲಿಂ ಸಮುದಾಯದವರ ಹೆಸರುಗಳನ್ನು ಅಕ್ರಮವಾಗಿ ಕೈಬಿಡುವ ಪ್ರಯತ್ನಗಳನ್ನು ತಡೆಯಲು ಶ್ರಮಿಸಿದ್ದೇನೆ. ಇದು ರಾಜಕೀಯ ಲಾಭಕ್ಕಾಗಿ ನಡೆಸಿದ ಹೋರಾಟವಲ್ಲ, ಪ್ರಜಾಪ್ರಭುತ್ವದ ಹಕ್ಕುಗಳನ್ನು ಉಳಿಸುವ ಉದ್ದೇಶದ ಹೋರಾಟವಾಗಿದೆ ಎಂದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡದಂತೆ ಶ್ರಮಿಸಿದ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಸಮುದಾಯದ ಮುಖಂಡರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನೂ ಸಲ್ಲಿಸಲಾಯಿತು.

ಮಾಜಿ ಡಿಸಿಸಿ ಅಧ್ಯಕ್ಷ ಜಿ.ಎಸ್.ಮುಹಮ್ಮದ್ ರಫೀಕ್ ಮಾತನಾಡಿ, ಮತದಾನ ಮಾಡಿದ ಬಳಿಕ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಹಾಗೂ ತಮ್ಮ ಸಮಸ್ಯೆಗಳಿಗೆ ಪರಿಹಾರ ಕೇಳುವ ಎಚ್ಚರವನ್ನು ಸಮುದಾಯ ಹೊಂದಿರಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಮುಖಂಡ ಕಣೇಕಲ್ ಸಾಹೇಬ್, ಪಾಲಿಕೆ ಸದಸ್ಯರಾದ ನೂರ್ ಮುಹಮ್ಮದ್, ಜಬ್ಬಾರ್, ನಾಜು, ಮಿಂಚು ಸೀನಾ ಹಾಗೂ ಮುಖಂಡರಾದ ಪೀರಾ ಸಾಹೇಬ್, ಅಯಾಜ್ ಅಹ್ಮದ್, ಹಾಜಿ ಇಲಿಯಾಸ್, ಅರ್ಷದ್, ಹುಸೇನ್ ಪೀರಾ ಉಪಸ್ಥಿತರಿದ್ದರು.

Tags

Nara Bharath ReddyminorityBallari
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X