Ballari | ಸಂಚಾರಿ ನಿಯಮ ಉಲ್ಲಂಘನೆ: ಬೈಕ್ ಸವಾರರಿಗೆ ಪೊಲೀಸರಿಂದ ದಂಡ

ಬಳ್ಳಾರಿ / ಕಂಪ್ಲಿ: ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವ ಸವಾರರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ವಿಧಿಸುತ್ತಿದೆ.
ಬಳ್ಳಾರಿ ಜಿಲ್ಲೆಯಾದ್ಯಂತ ಜೂ.1ರಿಂದ ಹೆಲ್ಮೆಟ್ ಧಾರಣೆ ಕಡ್ಡಾಯ ನಿಯಮ ಜಾರಿಯಾಗಿದ್ದರೂ, ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಸೋಮವಾರ ದಂಡ ವಿಧಿಸಿದರು.
ಈ ಕುರಿತು ಮಾತನಾಡಿದ ಪಿಐ ಕೆ.ಬಿ. ವಾಸುಕುಮಾರ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಆದೇಶದಂತೆ ಠಾಣೆ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧಾರಣೆ ಕುರಿತು ಈಗಾಗಲೇ ಜಾಗೃತಿ ಜಾಥಾ, ಅಭಿಯಾನ ಹಾಗೂ ಬ್ಯಾನರ್‌ಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ. ಆದರೂ ನಿಯಮ ಪಾಲಿಸದ ಸವಾರರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಪಿಎಸ್‌ಐ ಟಿ. ಮಹಾಂತೇಶ್, ಸಿಬ್ಬಂದಿ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story




