Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ʼವಿಜಯೀಭವʼ ಶಿಬಿರ ಸಮಾರೋಪ :...

Ballari | ʼವಿಜಯೀಭವʼ ಶಿಬಿರ ಸಮಾರೋಪ : ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 May 2026 4:50 PM IST
share
Ballari | ʼವಿಜಯೀಭವʼ ಶಿಬಿರ ಸಮಾರೋಪ : ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಾರ್ಯಕ್ರಮ

ಸಂಡೂರು/ಬಳ್ಳಾರಿ : ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ “ವಿಜಯೀಭವ” ಪಠ್ಯ ಪುಸ್ತಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಜಿಂದಾಲ್ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಜೀವನ್ ಸಂಗೀತ್ ಸಂಸ್ಥೆ ಹಮ್ಮಿಕೊಂಡಿದ್ದ ಈ ವಿಶೇಷ ಶಿಬಿರದಲ್ಲಿ ತಾಳೂರು, ಬನ್ನಿಹಟ್ಟಿ ಹಾಗೂ ವಡ್ಡು ಗ್ರಾಮದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಎರಡು ತಿಂಗಳ ಕಾಲ ಭಾಗವಹಿಸಿ ಹತ್ತನೇ ತರಗತಿಯ ಪಠ್ಯಾಭ್ಯಾಸದಲ್ಲಿ ತರಬೇತಿ ಪಡೆದರು.

ಶಿಬಿರದ ಅಂಗವಾಗಿ ವಿದ್ಯಾರ್ಥಿಗಳನ್ನು ಬೆಳಿಗ್ಗೆಯೇ ವಿದ್ಯಾನಗರಕ್ಕೆ ಕರೆದುಕೊಂಡು ಹೋಗಿ ಮಂದಿರ, ಓಪಿಜೆ ಮ್ಯೂಸಿಯಂ ಹಾಗೂ ಕಲಾಧಾಮಕ್ಕೆ ಭೇಟಿ ನೀಡಿಸಲಾಯಿತು. ಕಲಾಧಾಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ತಾಳೂರು ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ್ ಮಾತನಾಡಿ, “ಜೀವನ್ ಸಂಗೀತ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಈ ತರಬೇತಿ ಶಿಬಿರದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗಿದೆ. ಕಳೆದ ವರ್ಷ ನಡೆದ ಬೇಸಿಗೆ ಶಿಬಿರದ ಫಲವಾಗಿ 19 ವರ್ಷಗಳ ಬಳಿಕ ತಾಳೂರು ಶಾಲೆ ಹತ್ತನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿತು. ಈ ಬಾರಿ ‘ನಮ್ಮ ಚಿತ್ತ ನೂರ ಅರವತ್ತೈದರತ್ತ’ ಎಂಬ ಗುರಿಯೊಂದಿಗೆ ಶ್ರಮಿಸುತ್ತಿದ್ದೇವೆ” ಎಂದು ಹೇಳಿದರು.

ಜಿಂದಾಲ್ ಆಡಳಿತಾಧಿಕಾರಿ ಶ್ರೀಮತಿ ಭವ್ಯ ಮಾತನಾಡಿ, “ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಸಾಧನೆ ಸಾಧ್ಯ ಎಂಬುದನ್ನು ಈ ಶಿಬಿರ ತೋರಿಸಿದೆ. ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಬೆಳೆಬೇಕು” ಎಂದು ಕರೆ ನೀಡಿದರು.

ಅಧಿಕಾರಿ ಶಂಕ್ರಪ್ಪ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳ ಮೂಲಕ ನೀತಿಕಥೆಗಳನ್ನು ವಿವರಿಸಿದರು.

ಜೀವನ್ ಸಂಗೀತ್ ಸಂಸ್ಥೆಯ ಅಧ್ಯಕ್ಷೆ ಗೀತಾವೀರೇಶ್ ಮಾತನಾಡಿ, “ತಾಳೂರು ಶಾಲೆಯ ಫಲಿತಾಂಶ ಇಂದು ಜಿಲ್ಲೆಗೆ ಮಾದರಿಯಾಗಿದೆ. ನಮ್ಮ ಬೇಸಿಗೆ ಶಿಬಿರವೂ ಇದರಲ್ಲಿ ಪ್ರಮುಖ ಪಾತ್ರವಹಿಸಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಮಕ್ಕಳಿಗಾಗಿ “ನರಸಿಂಹ” ಅನಿಮೇಟೆಡ್ ಚಲನಚಿತ್ರ ಪ್ರದರ್ಶಿಸಲಾಯಿತು.

ಕಾರ್ಯಕ್ರಮವನ್ನು ವೀರೇಂದ್ರ ನಿರೂಪಿಸಿದರು. ಸುದೀಪ್, ಪ್ರಾರ್ಥನಾ ಹಾಗೂ ಸುಪ್ರಿಯಾ ವಿದ್ಯಾರ್ಥಿಗಳ ವ್ಯವಸ್ಥೆಯನ್ನು ನೋಡಿಕೊಂಡರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X