ಬಳ್ಳಾರಿ | ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಬಳ್ಳಾರಿ: ತಾಲ್ಲೂಕಿನ ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರೋಧಿಸಿ ಗ್ರಾಮಸ್ಥರು ಮಂಗಳವಾರ ಮಧ್ಯೆ ರಾತ್ರಿ 1ಗಂಟೆಗೆ ಪ್ರತಿಭಟನೆ ನಡೆಸಿದ್ದಾರೆ.
ರೂಪ ಗುಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಗೋಳು ಕೇಳುವವರಿಲ್ಲ. ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಮತ್ತು ಮೆಡಿಸಿನ್ ಸಿಗದೇ ರೋಗಿಗಳು ಪರದಾಟ ಸಾಮಾನ್ಯವಾಗಿದೆ. ಆಂಬ್ಯುಲೆನ್ಸ್ ಇಲ್ಲ, ಗರ್ಭಿಣಿ ಸ್ತ್ರೀಯರಿಗೆ ಸರಿಯಾದ ಚಿಕಿತ್ಸೆ ಇಲ್ಲ. ಆಸ್ಪತ್ರೆಯಲ್ಲಿ ಸಿಬ್ಬಂದಿ ಪ್ರತಿಯೊಂದಕ್ಕೂ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರ ಸುತ್ತಮುತ್ತಲಿನ 6 ಹಳ್ಳಿಗಳ ಕೇಂದ್ರ ಸ್ಥಾನವಾಗಿದ್ದು, ಇಲ್ಲಿಗೆ ಬಹಳಷ್ಟು ರೋಗಿಗಳು ಚಿಕಿತ್ಸೆ ಅರಸಿ ಬರುತ್ತಾರೆ. ಬಂದ ರೋಗಿಗಳಿಗೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಸ್ಥಳಕ್ಕೆ ಡಿಹೆಚ್ ಓ ಬರುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದೇ ಗಂಭೀರ ಸಮಸ್ಯೆಗಳು ಉದ್ಭವಿಸುತ್ತಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಪ್ರತಿಭಟನೆಯನ್ನು ನಡೆಸಿದರು.
ಬೆಳಿಗ್ಗೆ 10ಗಂಟೆಗೆ ಸ್ಥಳಕ್ಕೆ ಆಗಮಿಸಿದ ಡಿಹೆಚ್ ಓ ಅವರಿಗೆ ಸ್ಥಳೀಯರು ಮನವಿ ಮಾಡಿದರು.







