Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಮಹಿಳಾ ಸಬಲೀಕರಣ ಕುಟುಂಬದ...

Ballari | ಮಹಿಳಾ ಸಬಲೀಕರಣ ಕುಟುಂಬದ ಅಭಿವೃದ್ಧಿಗೆ ಪ್ರಮುಖ ಆಧಾರ: ಮಹಮ್ಮದ್ ಖಾಸೀಂ

ವಾರ್ತಾಭಾರತಿವಾರ್ತಾಭಾರತಿ17 Oct 2026 6:16 PM IST
share
Ballari | ಮಹಿಳಾ ಸಬಲೀಕರಣ ಕುಟುಂಬದ ಅಭಿವೃದ್ಧಿಗೆ ಪ್ರಮುಖ ಆಧಾರ: ಮಹಮ್ಮದ್ ಖಾಸೀಂ

ಸಂಡೂರು/ಬಳ್ಳಾರಿ: ಮಹಿಳಾ ಸಬಲೀಕರಣವು ಕುಟುಂಬದ ಅಭಿವೃದ್ಧಿ ಹಾಗೂ ಸಮಾಜದ ಪ್ರಗತಿಗೆ ಪ್ರಮುಖ ಆಧಾರವಾಗಿದೆ. ಕುಟುಂಬ ನಿರ್ವಹಣೆ, ಹಿರಿಯರ ಆರೈಕೆ ಮತ್ತು ಮಕ್ಕಳ ಲಾಲನೆ-ಪಾಲನೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಪತ್ರಕರ್ತ ಮಹಮ್ಮದ್ ಖಾಸೀಂ ಹೇಳಿದರು.

ಸಂಡೂರು ತಾಲೂಕಿನ ತಾರಾನಗರ ವಲಯದ ಆಶ್ರಯ ಕಾಲೋನಿ ಕಾರ್ಯಕ್ಷೇತ್ರದಲ್ಲಿರುವ ಸರಸ್ವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಆಟೋಟ ಸ್ಪರ್ಧೆಗಳು ಹಾಗೂ ಮಹಿಳಾ ಸದಸ್ಯರ ಅನಿಸಿಕೆಗಳ ವಿನಿಮಯದ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು.

ಮಹಿಳೆಯರು ದಿನನಿತ್ಯದ ಜೀವನದಲ್ಲಿ ವಹಿಸುವ ಜವಾಬ್ದಾರಿಗಳು, ಕುಟುಂಬವನ್ನು ಸಮರ್ಥವಾಗಿ ನಿರ್ವಹಿಸುವ ವಿಧಾನ, ಹಿರಿಯರನ್ನು ಗೌರವದಿಂದ ನೋಡಿಕೊಳ್ಳುವ ಮಹತ್ವ ಹಾಗೂ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಕಲಿಸುವ ಅಗತ್ಯದ ಕುರಿತು ಮಹಮ್ಮದ್ ಖಾಸೀಂ ಸುದೀರ್ಘವಾಗಿ ಮಾತನಾಡಿದರು. ಮಹಿಳೆಯರು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವುದರ ಜೊತೆಗೆ ವೈಯಕ್ತಿಕ ಬೆಳವಣಿಗೆ, ಆತ್ಮವಿಶ್ವಾಸ ವೃದ್ಧಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಮಹಿಳೆಯರ ಸಾಮರ್ಥ್ಯಕ್ಕೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತಾಗ ಕುಟುಂಬದ ಜೊತೆಗೆ ಸಮಾಜವೂ ಅಭಿವೃದ್ಧಿಯ ಹಾದಿಯಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂಬ ಸಂದೇಶವನ್ನು ಅವರು ನೀಡಿದರು. ಅವರ ಮಾತುಗಳು ನೆರೆದಿದ್ದ ಮಹಿಳಾ ಸದಸ್ಯರಿಗೆ ಪ್ರೇರಣಾದಾಯಕವಾಗಿದ್ದವು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಲಲಿತಾ, ಮೇಲ್ವಿಚಾರಕಿ ಮಂಜುಳಾ, ಜವಾಬ್ದಾರಿ ತಂಡದ ಅಧ್ಯಕ್ಷೆ ಬಸಮ್ಮ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ ಸೇರಿದಂತೆ ಸಂಘದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

Tags

EmpowermentwomenBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X