Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಪಟ್ಟಣದಲ್ಲಿ ಏಡ್ಸ್ ಕುರಿತು...

ಬಳ್ಳಾರಿ | ಪಟ್ಟಣದಲ್ಲಿ ಏಡ್ಸ್ ಕುರಿತು ಜಾಗೃತಿ: ಎಚ್‌ಐವಿ ಪರೀಕ್ಷೆ, ಆಪ್ತಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ18 Oct 2026 7:31 PM IST
share
ಬಳ್ಳಾರಿ | ಪಟ್ಟಣದಲ್ಲಿ ಏಡ್ಸ್ ಕುರಿತು ಜಾಗೃತಿ: ಎಚ್‌ಐವಿ ಪರೀಕ್ಷೆ, ಆಪ್ತಸಮಾಲೋಚನೆ

ಬಳ್ಳಾರಿ / ಕಂಪ್ಲಿ: ದೇಶವನ್ನು ಎಚ್‌ಐವಿ ಏಡ್ಸ್ ಮುಕ್ತ ಭಾರತವನ್ನಾಗಿ ಮಾಡುವ ಮಹದೋದ್ದೇಶದಿಂದ ಸಾರ್ವಜನಿಕರಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಎನ್.ಕರಿಬಸವ ಹೇಳಿದರು.

ಜಿಲ್ಲಾ ಎಚ್‌ಐವಿ ಏಡ್ಸ್ ನಿಯಂತ್ರಣ ಘಟಕ ಬಳ್ಳಾರಿ ಹಾಗೂ ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ಹತ್ತಿರದ ಪುನೀತ್ ರಾಜಕುಮಾರ್ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಎಚ್‌ಐವಿ/ಎಸ್‌ಟಿಐ ಪರೀಕ್ಷೆ, ಆಪ್ತಸಮಾಲೋಚನೆ, ಚಿಕಿತ್ಸೆ ಸೇವಾ ಸೌಲಭ್ಯಗಳ ಮಾಹಿತಿ ಹಾಗೂ ಮೊಬೈಲ್ ಸ್ಟೇಷನ್ ಫೋರಂ ಏಡ್ಸ್ ಸುರಕ್ಷಾ ಅಭಿಯಾನದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ಆಧುನಿಕ ದಿನಗಳಲ್ಲಿ ನಾನಾ ಕಾರಣಗಳಿಂದಾಗಿ ಜನರ ಆರೋಗ್ಯ ಕ್ಷೀಣಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇಂದಿನ ವೈದ್ಯಕೀಯ ಯುಗದಲ್ಲಿ ಪ್ರತಿಯೊಂದು ರೋಗಕ್ಕೂ ಸೂಕ್ತ ಔಷಧಿ ಹಾಗೂ ಚಿಕಿತ್ಸೆಗಳು ಲಭ್ಯವಿವೆ. ಆದ್ದರಿಂದ ಸಾರ್ವಜನಿಕರು ಯಾವುದೇ ಕಾಯಿಲೆಗಳನ್ನು ನಿರ್ಲಕ್ಷಿಸದೆ, ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣದ ಹೊಸ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಮೊಬೈಲ್ ವಾಹನದ ಮೂಲಕ ಸಾರ್ವಜನಿಕರಿಗೆ ಏಡ್ಸ್ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಗ್ರೆಂಟ್ ಎನ್‌ಜಿಒ ಸಂಸ್ಥೆಯ ಆನಂದ್, ರೇಖಾ, ಪ್ರಮುಖರಾದ ಈಶಪ್ಪ, ಇಸ್ಮಾಯಿಲ್, ತಿಪ್ಪೇಸ್ವಾಮಿ, ಗೌಸ್, ವಿರುಪಾಕ್ಷಿ, ಚಾಂದಬಾಷಾ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

BellaryAIDSHIV testingcounselling
share
ವಾರ್ತಾಭಾರತಿ
ವಾರ್ತಾಭಾರತಿ
Next Story
X