ಬಳ್ಳಾರಿ | ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಸಾಂದರ್ಭಿಕ ಚಿತ್ರ
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಳ್ಳಾರಿ-ಬೊಮ್ಮನಾಳ್ ರಸ್ತೆಯ ಹೊಲದ ಮಧ್ಯೆಯ ಇಳಿಜಾರು ಪ್ರದೇಶದಲ್ಲಿ ಸುಮಾರು 50 ರಿಂದ 55 ವರ್ಷದ ಅನಾಮಧೇಯ ವ್ಯಕ್ತಿಯು ಆ.4 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ: ಎತ್ತರ ಸುಮಾರು 5.4 ಅಡಿ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ತಲೆಯ ಮೇಲ್ಭಾಗದಲ್ಲಿ ಬೋಳು ಇದೆ. ಬಲಗೈಗೆ ವಿವಿಧ ಹರಳುಗಳುಳ್ಳ ರಾಖಿ ಕಬ್ಬಿಣದ ಕಡಗ, ಬಲಗೈ ಬೆರಳುಗಳಿಗೆ ಆಮೆ ಚಿಹ್ನೆಯ ಉಂಗುರ ಹೊಂದಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





