ಬಳ್ಳಾರಿ | ಹಾಕಿ ತರಬೇತುದಾರರ ಆಯ್ಕೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯ ಹಾಕಿ ಖೇಲೋ ಇಂಡಿಯಾ ಕೇಂದ್ರಕ್ಕೆ ಹಾಕಿ ತರಬೇತುದಾರರ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟುಗಳು ಎನ್.ಐ.ಎಸ್. ಡಿಪ್ಲೊಮಾ ಇನ್ ಹಾಕಿ ಅಥವಾ ಎಂಪೇಡ್ ಹಾಕಿ ಆಟದಲ್ಲಿ ವಿಶೇಷತೆ ಮತ್ತು ರಾಷ್ಟ್ರೀಯ ಪದಕ ವಿಜೇತ, ರಾಜ್ಯ ಪದಕ ವಿಜೇತ, ರಾಷ್ಟ್ರೀಯ ಮಟ್ಟದಲ್ಲಿ ಪ್ರಾತಿನಿಧ್ಯ ವಹಿಸಿದ ರಾಜ್ಯದವರು ಅರ್ಹರಾಗುತ್ತಾರೆ.
ಆಸಕ್ತ ಹಾಕಿ ತರಬೇತುದಾರರು ಅರ್ಜಿಗಳನ್ನು ಅ.15 ರೊಳಗಾಗಿ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





