ಬಳ್ಳಾರಿ | ಅ.13 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
ಬಳ್ಳಾರಿ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯನ್ನು ಅ.13 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಅಹವಾಲು ಸ್ವೀಕಾರ:
ಅ.13 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಂಸದ ಈ.ತುಕಾರಾಮ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಧಿಕಾರಿಗಳು ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಮುಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
Next Story





