ಬಳ್ಳಾರಿ | ವಚನ ಸಾಹಿತ್ಯ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಡಾ.ಫ.ಗು.ಹಳಕಟ್ಟಿ : ಕೆ.ಇ.ಚಿದಾನಂದಪ್ಪ

ಬಳ್ಳಾರಿ : ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಬುಧವಾರ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ 'ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾವ್ ಬಹುದ್ದೂರ್ ವೈ.ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಎ.ತಿಮ್ಮನಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ದೊಡ್ಡಯ್ಯ ವಿ.ಕಲ್ಲೂರು ಅವರ ತಂಡದವರು ವಚನ ಸಂಗೀತ ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಉಪತಹಶೀಲ್ದಾರ್ ಮುಹಮ್ಮದ್ ಸಾಧಿಕ್ ಭಾಷಾ, ಜಿಲ್ಲಾ ದೈಹಿಕ ಶಿಕ್ಷಕ ಕೊಟ್ರೇಶ್, ನಿವೃತ್ತ ಪಿಎಸ್‌ಐ ಹುಸೇನ್ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.