ಬಳ್ಳಾರಿ | ಉಚಿತ ಹೃದಯ ತಪಾಸಣಾ ಶಿಬಿರ

ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಕರ್ನಾಟಕದ ಪ್ರತಿಷ್ಠಿತ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಜನಸೇವೆಯ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಳ್ಳುತ್ತಿದೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮತ್ತು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಎಪಿಎಂಸಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಉಚಿತ ಹೃದಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಸಿಗೆ ನೀರುಣಿಸುವ ಮೂಲಕ ಆರೋಗ್ಯ ಶಿಬಿರವನ್ನು ಬ್ರಿಮ್ಸ್ ನ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಇಂದುಮತಿ ಉದ್ಘಾಸಿದರು.
ಮುಖ್ಯ ಅತಿಥಿಗಳಾದ ಬ್ರಿಮ್ಸ್ ನ ಆಡಳಿತಾಧಿಕಾರಿ ಎಸ್.ಎನ್.ರುದ್ರೇಶ್, ಹೃದಯತಜ್ಜ ಡಾ.ಎನ್.ಕೊಟ್ರೇಶ್ ಮಾತನಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ.ಮಹಾರುದ್ರಗೌಡರು, ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ್, ಉಪಾಧ್ಯಕ್ಷರಾದ ಎಸ್.ದೊಡ್ಡನಗೌಡ, ಖಜಾಂಚಿ ಪಿ.ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ.ಮರ್ಚೇಡ್ ಮಲ್ಲಿಕಾರ್ಜುನ ಗೌಡ, ವಿ.ರಾಮಚಂದ್ರ ಮತ್ತು ರೈತಣ್ಣ ಕ್ಲಿನಿಕ್ ನ ಚೇರ್ಮನ್ ಸುರೇಂದ್ರ ಕುಮಾರ್ ಭಾಪ್ನಾ ಅವರು ವೇದಿಕೆಯಲ್ಲಿದ್ದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.