ಬಳ್ಳಾರಿ | ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು, ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ತಾಲೂಕಿನ ರಾಮಸಾಗರ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸತತ 12ನೇ ವರ್ಷದ ಗೌರಿ ಹಬ್ಬದ ಅಂಗವಾಗಿ ಮಂಗಳವಾರ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಂತರ ನೂತನ ವಧು-ವರರಿಗೆ ಆಶೀರ್ವದಿಸಿ ಮಾತನಾಡಿದ ಅವರು, ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ. ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು, ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.
ಜಿಪಂ ಮಾಜಿ ಸದಸ್ಯ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ)ಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ, ಮುಖಂಡ ಶಿವಶಂಕರಗೌಡ, ಗ್ರಾಪಂ ಉಪಾಧ್ಯಕ್ಷ ಕಂಪ್ಲಿ ಕ್ಷೇತ್ರ ಎಸ್ಸಿ ಘಟಕದ ಅಧ್ಯಕ್ಷ ಆರ್.ಎಂ.ರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಚಿತ ಸಾಮೂಹಿಕ ವಿವಾಹದಲ್ಲಿ 28 ಜೋಡಿಗಳು ನವ ವಸಂತಕ್ಕೆ ಕಾಲಿಟ್ಟರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಜಗದೀಶಗೌಡ, ಕಮಲಾಪುರ ಸೋಮಶೇಖರ, ಕೊಟ್ಟಾಲ್ ವಿರೇಶ, ಹಾನಿ ಈರಣ್ಣ, ಕೆ.ಷಣ್ಮುಕಪ್ಪ, ವೀರಾಂಜಿನೀಯಲು, ಹೊಸಕೋಟೆ ಜಗದೀಶ, ಎ.ಸಿ.ದಾನಪ್ಪ, ಹೊನ್ನಳ್ಳಿ ಗಂಗಧಾರ, ಬಿ.ಸಿದ್ದಪ್ಪ, ಮೆಟ್ರಿ ಗಿರೀಶ್, ಬಳೆ ಮಲ್ಲಿಕಾರ್ಜುನ, ಜಾಫರ್ ಸೇರಿದಂತೆ ಅನೇಕರಿದ್ದರು







