ಬಳ್ಳಾರಿ | ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ : 322 ಚೀಲ ಅಕ್ಕಿ ಜಪ್ತಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಸಿರುಗುಪ್ಪ : ತಾಲ್ಲೂಕಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ವಿರುದ್ಧ ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಂದಾಜು 145 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಬಂಡ್ರಳ್ ಗ್ರಾಮದಿಂದ ಹೊಳಗುಂದಿ ಕಡೆಗೆ ಓಮ್ನಿ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ಆಹಾರ ಶಿರಸ್ತೇದಾರ ಹನುಮೇಶ್ ನೇತೃತ್ವದಲ್ಲಿ ಸಿರುಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಓಮ್ನಿಯಲ್ಲಿ ಸಾಗಾಟ ಮಾಡುತ್ತಿದ್ದ 40 ರಿಂದ 45 ಕೆಜಿ ತೂಕದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 322 ಚೀಲ ಪಡಿತರ ಅಕ್ಕಿಯನ್ನು ಗೋಡೌನ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿತ್ತು. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 4,93,000 ಎಂದು ತಿಳಿದು ಬಂದಿದೆ.
ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story




