Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಕಿತ್ತೂರು ರಾಣಿ ಚೆನ್ನಮ್ಮ...

ಬಳ್ಳಾರಿ | ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ23 Oct 2025 6:21 PM IST
share
ಬಳ್ಳಾರಿ | ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ವೀರ ನಾರಿಯ ಜೀವನದಿಂದ ಪ್ರೇರಣೆ ಪಡೆಯೋಣ : ಮುಂಡರಗಿ ನಾಗರಾಜ

ಬಳ್ಳಾರಿ: ಬ್ರಿಟಿಷರ ವಿರುದ್ಧ ಹೋರಾಡಿ ಹೆಮ್ಮೆಯ ಇತಿಹಾಸ ನಿರ್ಮಿಸಿದ ವೀರ ನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಅನೇಕ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.

ನಗರದ ಡಾ.ರಾಜ್‌ಕುಮಾರ್ ರಸ್ತೆ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಜೀವನದಲ್ಲಿ ಹೋರಾಟ ಮತ್ತು ಆತ್ಮಬಲ ಇರಬೇಕು. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಚಿಂತನೆ ಹಾಗೂ ಮೌಲ್ಯಗಳನ್ನು ಪಾಲಿಸಿಕೊಂಡು ಮೌಲ್ಯಯುತ ಬದುಕು ರೂಪಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಉಪಾಧ್ಯಕ್ಷ ಎಚ್. ಲಕ್ಷ್ಮಣ ಅವರು ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರು ಕೇವಲ ವೀರ ಮಹಿಳೆಯಲ್ಲ, ಸಮಾಜ ಪರಿವರ್ತನೆಗೆ ಪ್ರೇರಣೆಯಾದ ನಾಯಕಿ. ಅವರ ತ್ಯಾಗವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು, ಬಸವಣ್ಣನವರ ಸಮಾನತೆಯ ನೀತಿಗಳನ್ನು ಅಳವಡಿಸಿಕೊಂಡಿದ್ದರೆ ವಿದೇಶೀ ಆಳ್ವಿಕೆಗೆ ಅವಕಾಶವಿರುತ್ತಿರಲಿಲ್ಲ. ಇಂದು ಜಾತಿ-ಧರ್ಮ ಬೇಧ ಬಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು ಎಂದು ಹೇಳಿದರು.

ಡಾ. ಕಲಾವತಿ ಬಿ.ಜಿ (ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು) ಅವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನಚರಿತ್ರೆ ವಿವರಿಸಿ, ಅವರು ಕೇವಲ ತಮ್ಮ ಸಮುದಾಯದ ಪರವಾಗಿ ಅಲ್ಲ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ಫೂರ್ತಿದಾಯಕ ನಾಯಕಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕು. ಜಯಲಕ್ಷ್ಮೀ ಎಂ.ಎಸ್. ವಚನ ಸಂಗೀತ ಪ್ರಸ್ತುತಪಡಿಸಿದರು. ಸಂವಿಧಾನ ಪ್ರತಿಜ್ಞಾವಿಧಿ ನೆರವೇರಿಸಲಾಯಿತು.

ಜಯಂತಿ ಅಂಗವಾಗಿ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾದ ಮೆರವಣಿಗೆ ಇಂದಿರಾ ವೃತ್ತ, ಡಾ.ರಾಜ್‌ಕುಮಾರ್ ರಸ್ತೆ ಮೂಲಕ ಸಾಗಿಕೊಂಡು ಸಾಂಸ್ಕೃತಿಕ ಸಮುಚ್ಚಯದಲ್ಲಿ ಸಂಪನ್ನವಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿ.ನಾಗರಾಜ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪಂಪನಗೌಡ, ಹಾಗೂ ಅನೇಕ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X