ಬಳ್ಳಾರಿ | ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ : ಇಬ್ಬರು ಮೃತ್ಯು, 12 ಮಂದಿಗೆ ಗಾಯ

ಬಳ್ಳಾರಿ: ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, 12 ಮಂದಿ ಗಾಯಗೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬೈರಾಪುರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಶ್ವೇತಾ (38 ), ಬಾಲನಾಯ್ಕ್ (42) ಎಂದು ಗುರುತಿಸಲಾಗಿದೆ.
ಕೆಎಸ್ಸಾರ್ಟಿಸಿ ಬಸ್ ರಾಯಚೂರಿನಿಂದ ಬೆಂಗಳೂರಿಗೆ ಕಡೆ ಹೋಗುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಡಿವೈಎಸ್ಪಿ ಸಂತೋಷ ಚೌವ್ಹಾಣ್ ಭೇಟಿ ನೀಡಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





