ಬಳ್ಳಾರಿ | ಸ್ವಚ್ಛತೆಗೆ ಆದ್ಯತೆ ನೀಡೋಣ : ಗಾದಿಲಿಂಗಪ್ಪ

ಬಳ್ಳಾರಿ : ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ಕೊಳಗಲ್ಲು ಗ್ರಾಮದಲ್ಲಿ ಸ್ವಚ್ಛತೆಯೇ ಸೇವೆ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.
ಕೊಳಗಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷ ಗಾದಿಲಿಂಗಪ್ಪ ಪ್ರತಿಯೊಬ್ಬ ನಾಗರಿಕರು ವಾರದಲ್ಲಿ ಎರಡು ಗಂಟೆಗಳ ಕಾಲ ಶ್ರಮದಾನ ಮಾಡಿದರೆ ಗಾಂಧೀಜಿಯವರ ಕನಸಾದ ಸ್ವಚ್ಛ ಭಾರತ ನನಸಾಗಬಲ್ಲದು ಎಂದು ಕರೆ ನೀಡಿದರು.
ಕೇಂದ್ರ ಸಂವಹನ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಶಾಲೆಗಳು ಹಾಗೂ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ರಂಗೋಲಿ, ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಜಾಗೃತಿ ಜಾಥ ಹಾಗೂ ಸಂಗೀತ-ನಾಟಕ ವಿಭಾಗದ ಕಲಾ ತಂಡದವರಿಂದ ಜನಪದ ಗೀತೆಗಳು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದವು.
ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ವೈದ್ಯಾಧಿಕಾರಿಗಳು, ಕೇಂದ್ರ ಸಂವಹನ ಇಲಾಖೆ ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.





