ಬಳ್ಳಾರಿ | ಮಹಾತ್ಮ ಗಾಂಧೀಜಿ ಜಯಂತಿ : ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರಶಸ್ತಿ ವಿತರಣೆ

ಬಳ್ಳಾರಿ : ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಯುವ ಪೀಳಿಗೆಯು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಮಾನವೀಯ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರೀ ಅವರ ಆದರ್ಶಗಳನ್ನು ಪಾಲನೆ ಮಾಡುವ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಶಾಲಾ ಮಕ್ಕಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಇಬ್ರಾಹಿಂಪುರದ ಎಸ್.ಎಂ. ಹುಲುಗಪ್ಪ ತಂಡ ಭಜನಾ ಗೀತೆಗಳನ್ನು ಪ್ರಸ್ತುತಪಡಿಸಿತು. ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ/ಸ್ನಾತಕೋತ್ತರ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.
ವಿಜೇತರು:
• ಪ್ರೌಢಶಾಲೆ: ಪ್ರಥಮ ಚಿನ್ನ, ದ್ವಿತೀಯ ಸುಷ್ಮಿತಾ, ತೃತೀಯ ಶಾತಿ.ಹೆಚ್
• ಪದವಿಪೂರ್ವ: ಪ್ರಥಮ ಕೆ. ಪದ್ಮಾವತಿ, ದ್ವಿತೀಯ ಎಸ್. ಮಾರುತಮ್ಮ, ತೃತೀಯ ರೇವತಿ
• ಪದವಿ/ಸ್ನಾತಕೋತ್ತರ: ಪ್ರಥಮ ದೆವೆಂದ್ರ ನಾಯ್ಕ ಕಾರೇಕಲ್ಲು, ದ್ವಿತೀಯ ಜಿ. ವಿಜಯ್ ಕುಮಾರ್, ತೃತೀಯ ಮಾನ್ಯ.ಎನ್
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಾರ್ತಾ ಇಲಾಖೆ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.







