ಬಳ್ಳಾರಿ | ಜೂ.24 ರಂದು ‘ಬೃಹತ್ ರಕ್ತದಾನ ಶಿಬಿರ’
ಆರೋಗ್ಯವಂತರು ತಪ್ಪದೇ ರಕ್ತದಾನ ಮಾಡಿ : ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಹಯೋಗ ಮತ್ತು ಮಿನೇರಾ ಸ್ಟೀಲ್ ಇವರ ಸಹಕಾರದಲ್ಲಿ ಜೂ.24 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಶಿಬಿರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬಹುದಾಗಿದೆ.
ಜೂ.24 ರಂದು ನಡೆಯುವ ಬೃಹತ್ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story