Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಗರ್ಭಿಣಿಯರು ಪೌಷ್ಟಿಕ ಆಹಾರ...

ಬಳ್ಳಾರಿ | ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು: ಡಾ.ಯಲ್ಲಾ ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ30 Sept 2025 6:46 PM IST
share
ಬಳ್ಳಾರಿ | ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು: ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಗರ್ಭಿಣಿ ಮಹಿಳೆಯರು ಹಾಗೂ ತಾಯಂದಿರು ತಮ್ಮ ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸಬೇಕು. ಗರ್ಭಾವಸ್ಥೆಯಲ್ಲಿ ರಕ್ತಹೀನತೆ ತಡೆಯಲು ಪೌಷ್ಟಿಕ ಆಹಾರ ಹಾಗೂ ಕಬ್ಬಿಣಾಂಶದ ಮಾತ್ರೆಯನ್ನು ನಿಯಮಿತವಾಗಿ ಸೇವಿಸುವುದು ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ಸ್ವಸ್ಥ ನಾರಿ–ಸಶಕ್ತ ಪರಿವಾರ ಅಭಿಯಾನ” ಹಾಗೂ ಎಂಟನೇ ಪೋಷಣ್ ಮಾಸಾಚರಣೆ ಅಂಗವಾಗಿ ಮಂಗಳವಾರ ಬಳ್ಳಾರಿ ತಾಲ್ಲೂಕಿನ ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಗರ್ಭಿಣಿಯರು ಹಾಗೂ ತಾಯಂದಿರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಬೇಕು. ಹದಿಹರೆಯದ ಹೆಣ್ಣುಮಕ್ಕಳು ಸಕಾಲದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು,” ಎಂದು ಅವರು ಸಲಹೆ ನೀಡಿದರು.

ತಾಯಂದಿರು ಮಕ್ಕಳಿಗೆ ಜನನದ ಆರು ತಿಂಗಳ ಬಳಿಕ ತಾಯಿಯ ಎದೆಹಾಲಿನ ಜೊತೆಗೆ ಪೂರಕ ಆಹಾರ ನೀಡದಿದ್ದರೆ, ಮಕ್ಕಳಲ್ಲಿ ಅಪೌಷ್ಟಿಕತೆ ಉಂಟಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ಡಾ. ರಮೇಶ್ ಬಾಬು ಎಚ್ಚರಿಸಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳಿಗೆ ಅಗತ್ಯವಾದ ಪೌಷ್ಠಿಕಾಂಶ ಪೂರೈಸಲು ಆಯುಷ್ಮಾನ್ ಆರೋಗ್ಯ ಮಂದಿರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶಿಬಿರಗಳನ್ನು ಆಯೋಜಿಸಲಾಗುತ್ತಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರಿಗೆ ಪ್ರತಿ ತಿಂಗಳ ಮೂರನೇ ಶನಿವಾರ ನಡೆಯುವ ಗ್ರಾಮ ಆರೋಗ್ಯ ಪೌಷ್ಠಿಕ ದಿನಾಚರಣೆಯಲ್ಲಿ ಸ್ಥಳೀಯ ತರಕಾರಿಗಳಿಂದ ತಯಾರಿಸಬಹುದಾದ ಪೌಷ್ಟಿಕ ಆಹಾರ ಕುರಿತು ತಾಯಂದಿರಿಗೆ ತಿಳಿಸಲು ಸೂಚಿಸಲಾಯಿತು. ಆಶಾಕಾರ್ಯಕರ್ತೆಯರು ಪೋಷಣ್ ಮಾಸಾಚರಣೆ ಅಂಗವಾಗಿ ವಿವಿಧ ಪೌಷ್ಠಿಕ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಮೋಕ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಭಾರತಿ, ಪ್ರಸೂತಿ ತಜ್ಞೆ ಡಾ. ವಿಜಯಲಕ್ಷ್ಮಿ, ಎನ್‌ಸಿ‌ಡಿ ವೈದ್ಯೆ ಡಾ. ಸಿಂಧು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಕಚೇರಿ ಅಧೀಕ್ಷಕ ವೆಂಕಟಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜ್.ವಿ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ತಾಯಂದಿರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X