ಬಳ್ಳಾರಿ | ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿ : ಡಿಸಿ ನಾಗೇಂದ್ರ ಪ್ರಸಾದ್ ಕೆ. ಆದೇಶ

ಬಳ್ಳಾರಿ : ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ದೆಹಲಿಯ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಜ.18 ರಂದು ಆಲ್ ಇಂಡಿಯಾ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ-2026 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರೆಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
Next Story





