Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಝಮೀರ್ ಅಹ್ಮದ್ ಅವರಿಗೆ ಸಚಿವ...

ಬಳ್ಳಾರಿ | ಝಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jun 2026 7:17 PM IST
share
ಬಳ್ಳಾರಿ | ಝಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಹೊಸಪೇಟೆ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಡಾ.ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿ, ರಸ್ತೆ ಮಧ್ಯೆ ಕುಳಿತು ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಝಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದರ ಜೊತೆಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗಾಳೆಪ್ಪ ಮಾತನಾಡಿ, "ಝಮೀರ್ ಅಹ್ಮದ್ ಖಾನ್ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ಎಲ್ಲಾ ವರ್ಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ನಾಯಕ. ವಿಜಯನಗರ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ" ಎಂದು ಹೇಳಿದರು.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಹಾನಿಗೊಳಗಾದ ಸಂದರ್ಭದಲ್ಲಿ ಝಮೀರ್ ಅಹ್ಮದ್ ಖಾನ್ ತಕ್ಷಣ ಸ್ಪಂದಿಸಿ ರೈತರ ನೆರವಿಗೆ ಧಾವಿಸಿದ್ದರು. ಹೊಸ ಗೇಟ್ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ್ದಲ್ಲದೆ, ರಾಜ್ಯ ಸರಕಾರದ ಅನುದಾನದೊಂದಿಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರಕಾರಗಳೊಂದಿಗೆ ಸಮನ್ವಯ ಸಾಧಿಸಿ ದುರಸ್ತಿ ಕಾರ್ಯವನ್ನು ವೇಗವಾಗಿ ಪೂರ್ಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಗಾಳೆಪ್ಪ ತಿಳಿಸಿದರು.

ಗೇಟ್ ದುರಸ್ತಿ ಕಾರ್ಯ ಪೂರ್ಣಗೊಂಡ ಪರಿಣಾಮ ರೈತರಿಗೆ ಎರಡು ಬೆಳೆಗಳಿಗೆ ಅಗತ್ಯವಿರುವ ನೀರು ಲಭ್ಯವಾಗುತ್ತಿದೆ. ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಝಮೀರ್ ಅವರ ಪ್ರಯತ್ನಗಳು ಕಾರಣವಾಗಿವೆ. ಇಂತಹ ಜನಪರ ಹಾಗೂ ಅಭಿವೃದ್ಧಿ ಪರ ನಾಯಕರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದೆ ಎಂದು ರೈತರು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಮತ್ತು ಸಂಘಟನೆಯ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಗಮನ ಸೆಳೆಯುವ ಉದ್ದೇಶದಿಂದ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಯನ್ನು ಸರಕಾರದ ಮುಂದೆ ಮಂಡಿಸಿದರು. ಝಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೆಲಕಾಲ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾದರೂ, ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.

ಝಮೀರ್ ಅಹ್ಮದ್ ಖಾನ್ ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ. ತುಂಗಭದ್ರಾ ಕ್ರಸ್ಟ್ ಗೇಟ್ ಸಮಸ್ಯೆ ಸಂದರ್ಭದಲ್ಲಿ ರೈತರ ಪರ ನಿಂತು ಪರಿಹಾರ ಕಲ್ಪಿಸಿದವರು. ಅಂತಹ ಅಭಿವೃದ್ಧಿ ಪರ ನಾಯಕನಿಗೆ ಸಚಿವ ಸ್ಥಾನ ನೀಡುವುದರ ಜೊತೆಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಬೇಕು ಎಂದು ರಾಜ್ಯ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಗಾಳೆಪ್ಪ ಹೇಳಿದರು.

Tags

BellaryProtestfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X