Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಕಲಾವಿದರನ್ನು ಗೌರವಿಸುವ...

ಬಳ್ಳಾರಿ | ಕಲಾವಿದರನ್ನು ಗೌರವಿಸುವ ಸಂಸ್ಕಾರ ಬೆಳೆಸಬೇಕು: ಚಂದ್ರಶೇಖರ ಗೌಡ

ವಾರ್ತಾಭಾರತಿವಾರ್ತಾಭಾರತಿ10 March 2026 6:29 PM IST
share
ಬಳ್ಳಾರಿ | ಕಲಾವಿದರನ್ನು ಗೌರವಿಸುವ ಸಂಸ್ಕಾರ ಬೆಳೆಸಬೇಕು: ಚಂದ್ರಶೇಖರ ಗೌಡ

ಬಳ್ಳಾರಿ: ಕಲಾವಿದರನ್ನು ಪೋಷಿಸುವ ಹಾಗೂ ಗೌರವಿಸುವ ಕಲಾಸಂಸ್ಕಾರವನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಡಿಸಿಕೊಂಡಾಗ ಮಾತ್ರ ಕಲೆಗೆ ನಿಜವಾದ ಗೌರವ ಸಿಗುತ್ತದೆ ಎಂದು ಯುವ ಉದ್ಯಮಿ ಎಂ. ಚಂದ್ರಶೇಖರ ಗೌಡ ಹೇಳಿದರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಿರುಗುಪ್ಪದ ನೇತ್ರ ಕಲಾ ಸಂಘದ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೇತ್ರ ಕಲಾ ಸಂಸ್ಥೆ ಸಾಹಿತಿಗಳು, ಕಲಾವಿದರು ಹಾಗೂ ಸಮಾಜದ ವಿವಿಧ ಕ್ಷೇತ್ರದ ಸಾಧಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸನ್ಮಾನಿಸುವ ಕಾರ್ಯ ಮೆಚ್ಚುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ತಿಳಿವಳಿಕೆ ಕಡಿಮೆಯಾಗಲು ಸ್ವಾರ್ಥಪರ ಆಲೋಚನೆ ಕಾರಣವಾಗಿದೆ. ಯುವಕರು ಸತ್ಯದ ಚಿಂತನೆಯ ಜೊತೆಗೆ ಸಂಸ್ಕಾರಯುತ ಕಲೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ವೀರೇಶ್ ದಳವಾಯಿ ಮಾತನಾಡಿ, ಎಲೆಮರೆಯ ಕಾಯಿಯಂತಿರುವ ಅನೇಕ ಕಲಾವಿದರನ್ನು ಸರ್ಕಾರ ಗುರುತಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗಲಿಲ್ಲ. ಇದೀಗ 15ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿಗಳು, ಸಂಗೀತಜ್ಞರು, ಕಲಾವಿದರು, ಸಮಾಜಸೇವಕರು, ಪತ್ರಕರ್ತರು ಹಾಗೂ ಸಂಘ–ಸಂಸ್ಥೆಗಳ ಸಂಘಟಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಚಿಕ್ಕುಂತಿ ಮಹಾಮಠದ ಬಸವಲಿಂಗ ಶಿವಮೂರ್ತಿ ಸ್ವಾಮಿಗಳು ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಬಿ. ನಾಗರಾಜ, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಮಾನಯ್ಯ, ಹಿರಿಯ ಸಾಹಿತಿ ಗಂಗಾಧರ ಪತ್ತಾರ್, ನೇತ್ರ ಕಲಾ ಸಂಘದ ಅಧ್ಯಕ್ಷ ದಳವಾಯಿ ಅಂಬಣ್ಣ, ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಎಲ್ಲನಗೌಡ, ರಂಗತೋರಣದ ಪ್ರಭುದೇವ್ ಕಪ್ಪಗಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X