Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ ಜಿಲ್ಲೆಯ 10 ಕ್ಷೇತ್ರಗಳಲ್ಲೂ...

ಬಳ್ಳಾರಿ ಜಿಲ್ಲೆಯ 10 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಮಾಜಿ ಸಚಿವ ಜನಾರ್ದನ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ3 Sept 2026 6:41 PM IST
share
ಬಳ್ಳಾರಿ ಜಿಲ್ಲೆಯ 10 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಮಾಜಿ ಸಚಿವ ಜನಾರ್ದನ ರೆಡ್ಡಿ

ಸಿರುಗುಪ್ಪ: 2028ರ ವಿಧಾನಸಭಾ ಚುನಾವಣೆಯಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ 10 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ತೆಕ್ಕಲಕೋಟೆ ಪಟ್ಟಣದ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರ ನಿವಾಸದ ಆವರಣದಲ್ಲಿ ಬುಧವಾರ ನಡೆದ ಬಿಜೆಪಿ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಯುವಕರು, ಮಹಿಳೆಯರು, ರೈತರು ಹಾಗೂ ಬಡವರಿಗೆ ಸೇರಬೇಕಿದ್ದ ಹಣ ದುರ್ಬಳಕೆಯಾಗಿದೆ. ಈ ಹಣವನ್ನು ತೆಲಂಗಾಣ ಹಾಗೂ ಸಂಡೂರು ಚುನಾವಣೆಗಳಿಗೆ ಬಳಸಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದರು.

ಕಾಂಗ್ರೆಸ್ ಪಕ್ಷ ತಮ್ಮನ್ನು 14 ವರ್ಷಗಳ ಕಾಲ ಬಳ್ಳಾರಿಯಿಂದ ದೂರವಿಟ್ಟಿತ್ತು. ‘ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಇರಬಾರದು ಎಂಬ ಕಾರಣಕ್ಕೆ ಜೈಲಿಗೆ ಕಳುಹಿಸಲಾಯಿತು. ನಾನು ಹೊರಗಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಭಯ ಕಾಂಗ್ರೆಸ್ ನಾಯಕರಲ್ಲಿತ್ತು’ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಅವರು ಎರಡು ತಿಂಗಳು ಜೈಲಿನಲ್ಲಿದ್ದ ಸಂದರ್ಭದಲ್ಲಿ ತಮಗಾದ ಕಷ್ಟಗಳನ್ನು ಹೇಳಿಕೊಂಡಿದ್ದರು. ಆದರೆ ತಾವು 43 ತಿಂಗಳು ಜೈಲಿನಲ್ಲಿದ್ದ ವಿಚಾರವನ್ನು ಅವರು ಮರೆತಿದ್ದಾರೆ ಎಂದು ಜನಾರ್ದನ ರೆಡ್ಡಿ ವ್ಯಂಗ್ಯವಾಡಿದರು.

ಕಾಂಗ್ರೆಸ್ ನಾಯಕರು ತಮ್ಮನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಿಸಿದ್ದರು. ಇಲ್ಲವಾದರೆ ಗಣಿಗಾರಿಕೆ ಬಂದ್ ಮಾಡಿ ಬಂಧಿಸಬೇಕು ಎಂಬ ಚರ್ಚೆಯೂ ನಡೆದಿತ್ತು. ಆದರೆ ಸುಷ್ಮಾ ಸ್ವರಾಜ್ ಅವರಿಗೆ ದ್ರೋಹ ಮಾಡಿ ಬಿಜೆಪಿ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕುವುದಿಲ್ಲ ಎಂದು ಆಗಲೇ ಸ್ಪಷ್ಟಪಡಿಸಿದ್ದಾಗಿ ತಿಳಿಸಿದರು.

ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬುದಕ್ಕೆ ಶಾಸಕ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದೇ ಸಾಕ್ಷಿ ಎಂದು ಆರೋಪಿಸಿದರು. ಸಿರುಗುಪ್ಪ ತಾಲೂಕಿನಲ್ಲಿ ಬರ ಪರಿಸ್ಥಿತಿ ಇದ್ದರೂ ಶಾಸಕ ಜನರ ನೆರವಿಗೆ ಬಂದಿಲ್ಲ. ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ತಾವು ಈಗಾಗಲೇ ಒತ್ತಾಯಿಸಿದ್ದೇವೆ. ಆದರೆ ಹಚ್ಚೊಳ್ಳಿ ಹೋಬಳಿಯನ್ನು ಹೊರತುಪಡಿಸಿ ಉಳಿದ ಪ್ರದೇಶವನ್ನು ಬರಪೀಡಿತವೆಂದು ಘೋಷಿಸುವಂತೆ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿರುವುದು ಈ ಭಾಗಕ್ಕೆ ಅನ್ಯಾಯವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು, ತಾಲೂಕು ಘಟಕದ ಅಧ್ಯಕ್ಷ ಕೆ. ಮಲ್ಲಿಕಾರ್ಜುನಸ್ವಾಮಿ, ಕೆ.ಎಸ್. ದಿವಾಕರ, ದಮ್ಮೂರು ಶೇಖರ್, ಹನುಮಂತಪ್ಪ, ನಿಟ್ಟೂರು ಮರೇಗೌಡ, ಶರಣ ಬಸವ, ಮೇಕೆಲಿ ವೀರೇಶ, ಬಿ. ದೊಡ್ಡಯ್ಯ, ಚಾಗಿ ಸುಬ್ಬಯ್ಯ, ವೀರನಗೌಡ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Janardhana ReddyBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X