ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಭೈರತಿ ಸುರೇಶ್

ಬಳ್ಳಾರಿ: ಸಿಎಂ ಬದಲಾವಣೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬೈರತಿ ಸುರೇಶ್, ಸಿಎಂ, ಡಿಸಿಎಂ ಇಬ್ಬರೂ ನಮ್ಮ ಪಕ್ಷದವರೇ ಆಗಿದ್ದಾರೆ. ಅವರು ಜೊತೆಯಾಗಿ ಬ್ರೇಕ್ ಫಾಸ್ಟ್ ಮಾಡಿದರೆ ತಪ್ಪೇನು? ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರ ಜೊತೆಗೆ ಬ್ರೇಕ್ ಫಾಸ್ಟ್ ಮಾಡಿದರೆ ಚರ್ಚೆ ಮಾಡಬೇಕು. ನಮ್ಮ ಪಕ್ಷದವರ ಮನೆಗೆ ಹೋದರೆ ವಿಶೇಷ ಏನೂ ಇಲ್ಲ ಎಂದು ಹೇಳಿದರು.
ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವುದು ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಬೈರತಿ ಸುರೇಶ್, ಹೈಕಮಾಂಡ್ ತೀರ್ಮಾನ ಮಾಡಿದರೆ ನಾಗೇಂದ್ರ ಕೂಡ ಸಚಿವರಾಗುತ್ತಾರೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ನಾಗೇಂದ್ರ, ಶಾಸಕ ಭರತ್ ರೆಡ್ಡಿ, ಶಾಸಕ ಕಂಪ್ಲಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Next Story





