Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ನಗರೋತ್ಥಾನ ಹಂತ-4 ರ ಬಾಕಿ...

ನಗರೋತ್ಥಾನ ಹಂತ-4 ರ ಬಾಕಿ ಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸಿ : ಸಚಿವ ರಹೀಂ ಖಾನ್

ವಾರ್ತಾಭಾರತಿವಾರ್ತಾಭಾರತಿ14 Aug 2025 9:54 PM IST
share
ನಗರೋತ್ಥಾನ ಹಂತ-4 ರ ಬಾಕಿ ಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸಿ : ಸಚಿವ ರಹೀಂ ಖಾನ್
ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ : ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಗರೋತ್ಥಾನ ಹಂತ-4 ರಲ್ಲಿ ಕೈಗೊಂಡಿರುವ ವಿವಿಧ ಬಾಕಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಗೆ ನಗರೋತ್ಥಾನ ಯೋಜನೆಯಡಿ 4ನೇ ಹಂತದಲ್ಲಿ ವಿವಿಧ ಕಾಮಗಾರಿಗಳಿಗೆ 68 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ 31 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನೂ ಪೂರ್ಣಗೊಳ್ಳದ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಈ ಕುರಿತು ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.

ನಗರೋತ್ಥಾನ ಹಂತ-4 ರಲ್ಲಿ ಮಂಜೂರಾದ 104 ಕಾಮಗಾರಿಗಳಲ್ಲಿ 38 ಕಾಮಗಾರಿಗಳು ಪೂರ್ಣಗೊಂಡಿದ್ದು, 45 ಕಾಮಗಾರಿಗಳು ಪ್ರಗತಿಯಲ್ಲಿವೆ. ಅದರಲ್ಲಿ 32 ವೈಯಕ್ತಿಕ ಕಾಮಗಾರಿಗಳಿಗೆ ಹಾಗೂ 2 ವಂತಿಕೆ ಕಾಮಗಾರಿಗಳಿಗೆ ಹಣ ಬಿಡುಗಡೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೂ ಪ್ರಾರಂಭಿಸಬೇಕಾದ 22 ಕಾಮಗಾರಿಗಳಲ್ಲಿ 4 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಅಬ್ದುಲ್ ರೆಹಮಾನ್ ಅವರು ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಹೀಂ ಖಾನ್ ಅವರು, ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದಾಗ ಮುಖ್ಯಮಂತ್ರಿಯವರು, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದು, ಮೂರು ತಿಂಗಳೊಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅನುದಾನ ಬಿಡುಗಡೆಗಾಗಿ ಗುತ್ತಿಗೆದಾರರನ್ನು ಕಚೇರಿಗೆ ಅಲೆದಾಡಿಸುವಂತಿಲ್ಲ. ಸಂಬಂಧಿಸಿದ ಇಂಜಿನಿಯರ್ ಗಳ ಸಭೆ ನಡೆಸಿ ಸೂಕ್ತ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿನ ವಿವಿಧ ಆಸ್ತಿ, ನೀರಿನ ಶುಲ್ಕ ಮತ್ತು ಅಂಗಡಿ ಶುಲ್ಕ, ಟ್ರೇಡ್ ಲೈಸೆನ್ಸ್ ಗಳ ತೆರಿಗೆ ಹಣವನ್ನು ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ವಸೂಲಿ ಮಾಡಿ ಶೇಕಡವಾರು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಸೇರಿದಂತೆ ಗ್ರಾಪಂ ವ್ಯಾಪ್ತಿಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗಿದೆ. ನೀರು ಸರಬರಾಜು ಪೈಪ್ ಲೈನ್ ಗಳಲ್ಲಿ ಚರಂಡಿ ನೀರು ಸೇರಿದಂತೆ ಯಾವುದೇ ಕಲುಷಿತ ನೀರು ಸೇರದಂತೆ ಜಾಗ್ರತೆ ವಹಿಸಲಾಗಿದೆ. ಓವರ್ ಹೆಡ್ ಟ್ಯಾಂಕ್ ಗಳನ್ನು ಪ್ರತಿ 6 ತಿಂಗಳಿಗೊಮ್ಮೆ ಸ್ವಚ್ಛಗೊಳಿಸುವಂತೆ, ಬಳಿಕ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ಕುಡಿಯಲು ಸರಬರಾಜು ಮಾಡಲಾಗುತ್ತಿದೆ ಮತ್ತು ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಇ-ಖಾತಾ ವಿತರಣೆ ಸಂಬಂಧಿಸಿದಂತೆ, ಪ್ರಗತಿ ಸಾಧಿಸಬೇಕು. ಖಾತಾ ವಿತರಣೆಯಲ್ಲಿ ಯಾವುದೇ ಗೊಂದಲ ಮತ್ತು ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದರೆ ಚರ್ಚಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದರಲ್ಲದೇ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯು ಅಗತ್ಯವಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ನಿರ್ವಹಣೆ ಕುರಿತು ಭೇಟಿ ನಡೆಸಬೇಕು ಎಂದರು.

ಸಭೆಯಲ್ಲಿ 24*7 ಕುಡಿಯುವ ನೀರು ಸರಬರಾಜು, ಯುಜಿಡಿ ಸೇರಿದಂತೆ ವಿವಿಧ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ವರದಿಗಳ ಕುರಿತು ಮಾಹಿತಿ ಪಡೆದ ಸಚಿವರು ಹಲವು ಸಲಹೆ-ಸೂಚನೆ ಅಧಿಕಾರಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಚಿವರ ಆಪ್ತ ಕಾರ್ಯದರ್ಶಿ ಮುರಳಿಧರ್ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಎಂಜಿನಿಯರ್ ಗಳು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X