ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ನಮ್ಮ ಸರಕಾರದ ಪ್ರಮುಖ ಮೈಲಿಗಲ್ಲು: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನಮ್ಮ ರಾಜ್ಯದ ಘನ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಆಧಾರಿತ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಸರ್ಕಾರದ ಮಹತ್ವದ ಸಾಧನೆಗಳಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ಅವರು, ಬಳ್ಳಾರಿ ನೆಹರೂ ಕಾಲೋನಿಯಲ್ಲಿರುವ ನನ್ನ ನಿವಾಸಕ್ಕೆ ಸಮೀಕ್ಷಾ ತಂಡ ಬಂದು ಕೆಲಸ ನಿರ್ವಹಿಸಿತು. ನಾನು ಗಣತಿದಾರರ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ, ಸಮೀಕ್ಷಾ ಘೋಷಣಾ ಪತ್ರಕ್ಕೆ ಸಹಿ ಮಾಡಿದ್ದೇನೆ. ಇದು ನನ್ನ ನಾಗರಿಕ ಕರ್ತವ್ಯದ ಭಾಗ ಎಂದು ತಿಳಿಸಿದ್ದಾರೆ.
ಈವರೆಗೆ ನಡೆದ ಸಮೀಕ್ಷೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಈ ಸಮೀಕ್ಷೆಯಿಂದ ದೊರೆಯುವ ಮಾಹಿತಿ ರಾಜ್ಯ ಸರ್ಕಾರಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳ ರೂಪರೇಷೆ ಸಿದ್ಧಪಡಿಸಲು ಬಹುಮುಖ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Next Story





