Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ: ಹತ್ತಿ ಬೆಳೆಯಲ್ಲಿ ಗುಲಾಬಿ...

ಬಳ್ಳಾರಿ: ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿ ಕೊರಕರ ನಿರ್ವಹಣೆ ಕುರಿತು ತರಬೇತಿ

ರೈತರು ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಿ: ಎಸ್.ಎನ್.ಮಂಜುನಾಥ

ವಾರ್ತಾಭಾರತಿವಾರ್ತಾಭಾರತಿ1 Aug 2025 10:30 PM IST
share
ಬಳ್ಳಾರಿ: ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿ ಕೊರಕರ ನಿರ್ವಹಣೆ ಕುರಿತು ತರಬೇತಿ

ಬಳ್ಳಾರಿ: ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಆದಾಯ ದ್ವಿಗುಣಗೊಳಿಸಿಕೊಳ್ಳಬೇಕು ಎಂದು ಉಪ ಕೃಷಿನಿರ್ದೇಶಕ ಎಸ್.ಎನ್.ಮಂಜುನಾಥ ಅವರು ತಿಳಿಸಿದರು.

ಕೃಷಿ ಇಲಾಖೆ ವತಿಯಿಂದ ಆತ್ಮ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ರೈತರ ತರಬೇತಿ ಕಾರ್ಯಕ್ರಮ, ರೈತ ಕ್ಷೇತ್ರ ಪಾಠಶಾಲೆ, ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿ ಕೊರಕದ ನಿರ್ವಹಣೆ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿ ಕೊರಕ ಎಂಬ ಕೀಟ ಅತಿಯಾಗಿ ಹಾನಿಯನ್ನುಂಟು ಮಾಡುತ್ತದೆ. ಇದರ ನಿರ್ವಹಣೆಗೆ ರೈತರು ಬೇವಿನ ಕಶಾಯ ಅಥವಾ ಥಯೋಡಿಕಾರ್ಬ್ ಅನ್ನು ಸಿಂಪಡಿಸಬೇಕು ಎಂದು ತಿಳಿಸಿದರು.

ರೈತರು ಒಂದೇ ಬೆಳೆಯನ್ನು ಅವಲಂಬಿಸದೇ ಬೆಳೆ ಪರಿವರ್ತನೆಯನ್ನು ಕೈಗೊಳ್ಳಬೇಕು. ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಬಳಕೆಯನ್ನು ರೈತರು ಉಪಯೋಗಿಸುವುದರಿಂದ ಬೇಸಾಯದ ಖರ್ಚನ್ನು ತಗ್ಗಿಸಬಹುದು ಎಂದು ರೈತರಿಕೆ ಮನವರಿಕೆ ಮಾಡಿಕೊಟ್ಟರು.

ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಅವರು ಮಾತನಾಡಿ, ರೈತರು ತಾವು ಬೆಳೆದ ಬೆಳೆಗಳಿಗೆ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಬೇಕು. ಅತಿವೃಷ್ಟಿ ಅಥವಾ ಅನಾವೃಷ್ಟಿ ಸಂಭವಿಸಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ಹತ್ತಿ ಬೆಳೆಯಲ್ಲಿ ರಸ ಹೀರುವ ಕೀಟಗಳನ್ನು ನಿರ್ವಹಣೆ ಮಾಡಲು ಬೇವು ಆಧಾರಿತ ಕೀಟನಾಶಕಗಳನ್ನು ಸಿಂಪಡಣೆ ಮಾಡಬೇಕು. ಗುಲಾಬಿ ಕಾಯಿ ಕೊರಕದ ನಿರ್ವಹಣೆಗೆ ಪ್ರತಿ ಎಕರೆಗೆ 2 ರಂತೆ ಲಿಂಗಾಕರ್ಷಕ ಬಲೆಗಳನ್ನು ನೆಡಬೇಕು ಎಂದು ಹೇಳಿದರು.

ಹಗರಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತç ವಿಜ್ಞಾನಿಗಳಾದ ಮಲ್ಲೇಶ್ ಅವರು ಮಾತನಾಡಿ, ರೈತರು ಎಕರೆಗೆ 2 ರಿಂದ 3 ಪ್ಯಾಕೆಟ್ ಹತ್ತಿ ಬೀಜವನ್ನು ಉಪಯೋಗಿಸದೆ, ಒಂದು ಪ್ಯಾಕೆಟ್ ಬೀಜವನ್ನು ಉಪಯೋಗಿಸಬೇಕು. ಗಿಡದಿಂದ ಗಿಡಕ್ಕೆ ಅಂತರ ಕಾಪಾಡುವುದರಿಂದ ಇಳುವರಿಯನ್ನು ಹೆಚ್ಚಿಸಬಹುದು ಎಂದು ತಿಳಿಸಿದರು.

ಬಿಟಿ ಹತ್ತಿ ಬೆಳೆಯಲು ಅನುಮತಿ ನೀಡಿದಾಗಿನಿಂದಲೂ ಇಲ್ಲಿಯವರೆಗೆ ಬಿಟಿರಹಿತ ಹತ್ತಿ (ರೆಫ್ಯೂಜಿ)ಯನ್ನು ಬೆಳೆಯದಿರುವುದು ಗುಲಾಬಿ ಕಾಯಿ ಕೊರಕದ ಉಲ್ಬಣಕ್ಕೆ ಕಾರಣವಾಗಿದೆ ಎಂದರಲ್ಲದೇ ಕೀಟನಾಶಕಗಳನ್ನು ಶಿಫಾರಸ್ಸು ಮಾಡಿರುವುದಕ್ಕಿಂತ ಹೆಚ್ಚಿನ ಬಳಕೆ ಮಾಡಿರುವುದರಿಂದ ಈ ಕೀಟವು ಹಲವು ಕೀಟನಾಶಕಗಳಿಗೆ ನಿರೋಧಕಶಕ್ತಿಯನ್ನು ಬೆಳೆಸಿಕೊಂಡಿದೆ ಎಂದರು.

ಗುಲಾಬಿ ಕಾಯಿ ಕೊರಕ ಕಂಡುಬಂದಲ್ಲಿ 3 ಮಿ.ಲೀ. ಬೇವಿನ ಮೂಲದ ಕೀಟನಾಶಕ ಅಥವಾ 1 ಗ್ರಾಂ ಥಯೋಡಿಕಾರ್ಬ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಕೀಟನಾಶಕವನ್ನು ಸಿಂಪಡಿಸಬೇಕು ಎಂದು ಮಾಹಿತಿ ನೀಡಿದರು.

ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಬಸವರಾಜ್ ಸಿಂಧಿಗೇರಿ, ಕೃಷಿ ಇಲಾಖೆಯಡಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಿದರು.

ಇಫ್ಕೊದವರಿಂದ ರೈತ ಕ್ಷೇತ್ರ ಪಾಠಶಾಲೆಯಡಿ ಹತ್ತಿ ಬೆಳೆಗೆ ನ್ಯಾನೋ ಯೂರಿಯಾ ಹಾಗೂ ಸಾಗರಿಕಾ ಎಂಬ ದ್ರಾವಣವನ್ನು ಡ್ರೋನ್ ಮೂಲಕ ಸಿಂಪಡಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಗುರುಸಿದ್ದಮೂರ್ತಿ, ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕಿ ಕವಿತಾ ಕುಮಾರಿ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕಿ ವಾಣಿ ಕೋರಪ್ಪಳ, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಶಿಲ್ಪಾ, ರೇಣುಕಾರಾದ್ಯ, ಕೃಷಿ ಸಂಜೀವಿನಿ ಮಣಿಕೃಷ್ಣ, ಇಫ್ಕೊ ಕಂಪನಿಯ ಕ್ಷೇತ್ರಾಧಿಕಾರಿಗಳಾದ ಸಾಗರ್, ಸಚಿನ್ ಸೇರಿದಂತೆ ಇತರೆ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X