ಬಳ್ಳಾರಿ ಚಲೋ ಪಾದಯಾತ್ರೆ: ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸಹಿತ 22 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್

ಬಳ್ಳಾರಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಹಮ್ಮಿಕೊಳ್ಳಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ವೇಳೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ ಮತ್ತು ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಮರಚೇಡು ಗ್ರಾಮದಿಂದ ಬಳ್ಳಾರಿ ನಗರದವರೆಗೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯ ಮಾರ್ಗದುದ್ದಕ್ಕೂ ಜಿಲ್ಲಾಧಿಕಾರಿಯ ಆದೇಶವನ್ನು ಮೀರಿ, ಪೂರ್ವಾನುಮತಿಯಿಲ್ಲದೆ ಬ್ಯಾನರ್ ಹಾಗೂ ಬಾವುಟಗಳನ್ನು ಅಳವಡಿಸಲಾಗಿತ್ತು. ನಿಯಮಬಾಹಿರವಾಗಿದ್ದ ಈ ಬ್ಯಾನರ್ ಗಳನ್ನು ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಇದನ್ನು ಖಂಡಿಸಿ ಸೆಪ್ಟಂಬರ್ 9ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ರಸ್ತೆ ಸಂಚಾರ ತಡೆದು ಸಾರ್ವಜನಿಕರಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ತಿಳಿದುಬಂದಿದೆ.
Next Story




