Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂಡೂರಿನಲ್ಲಿ ತ್ಯಾಜ್ಯಮುಕ್ತ ನಗರ ಅಭಿಯಾನ

ಸಂಡೂರಿನಲ್ಲಿ ತ್ಯಾಜ್ಯಮುಕ್ತ ನಗರ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ7 Aug 2026 8:11 PM IST
share
ಸಂಡೂರಿನಲ್ಲಿ ತ್ಯಾಜ್ಯಮುಕ್ತ ನಗರ ಅಭಿಯಾನ
ಜಿವಿಪಿ ತೆರವುಗೊಳಿಸಿ ಹಸಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆ

ಸಂಡೂರು/ಬಳ್ಳಾರಿ, ಆ.8: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ “ತ್ಯಾಜ್ಯಮುಕ್ತ ನಗರ – ಸ್ವಚ್ಛ ನಗರ, ಆರೋಗ್ಯಕರ ರಾಷ್ಟ್ರ” ಅಭಿಯಾನದಡಿ ಸಂಡೂರು ಪುರಸಭೆಯು ವಾರ್ಡ್ ಸಂಖ್ಯೆ 12ರ ಕುರ್ಮಟ್ಟಿ ರಸ್ತೆಯಲ್ಲಿದ್ದ ಜಿವಿಪಿ (Garbage Vulnerable Point) ಅನ್ನು ತೆರವುಗೊಳಿಸಿ, ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಹೆಜ್ಜೆ ಇಟ್ಟಿದೆ.

ಕುರ್ಮಟ್ಟಿ ರಸ್ತೆಯ ಗುಡ್ಡದ ಮೇಲಿರುವ ಸುಮಾರು 80 ಮನೆಗಳಿಗೆ ಮನೆ-ಮನೆ ಕಸ ಸಂಗ್ರಹ ವಾಹನ ಅಥವಾ ಪುಷ್‌ಕಾರ್ಟ್ ತಲುಪಲು ಸಾಧ್ಯವಾಗದ ಕಾರಣ, ನಿವಾಸಿಗಳು ಸಮೀಪದ ಖಾಲಿ ಜಾಗದಲ್ಲಿ ತ್ಯಾಜ್ಯ ಎಸೆಯುತ್ತಿದ್ದು, ಅದು ಜಿವಿಪಿಯಾಗಿ ಮಾರ್ಪಟ್ಟಿತ್ತು. ಇದರಿಂದ ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದವು.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪುರಸಭೆಯು ಸ್ಥಳವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಅಲ್ಲಿಯೇ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಿದೆ. ಇದರ ಮೂಲಕ ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಸ್ಥಳದಲ್ಲೇ ಗೊಬ್ಬರವಾಗಿ ಪರಿವರ್ತಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಜೊತೆಗೆ, ಒಣ ತ್ಯಾಜ್ಯವನ್ನು ಮಾತ್ರ ಮನೆ-ಮನೆಗಳಿಂದ ಸಂಗ್ರಹಿಸಲು ಒಬ್ಬ ಪೌರಕಾರ್ಮಿಕರನ್ನು ನಿಯೋಜಿಸಲಾಗಿದ್ದು, ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸುವ ವ್ಯವಸ್ಥೆಗೆ ಉತ್ತೇಜನ ನೀಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಬಿ. ವಿನಯ್ ಕುಮಾರ್ ಗೌಡ, ಪರಿಸರ ಅಭಿಯಂತರ ಅನ್ನಪೂರ್ಣ ಡಿ., ಕಿರಿಯ ಆರೋಗ್ಯ ನಿರೀಕ್ಷಕಿ ಕೆ. ಶಿವರಂಜಿನಿ, ಸಮುದಾಯ ಸಂಘಟಕರಾದ ಕಾವ್ಯಾಂಜಲಿ, ಧೀನಾ, ಮರಕ್ಕಾ, ಅನಿತಾ, ಚೈತ್ರಾ ಹಾಗೂ ಸ್ಥಳೀಯ ನಿವಾಸಿಗಳು ಭಾಗವಹಿಸಿ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದರು.

ನಗರವನ್ನು ತ್ಯಾಜ್ಯಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ ಪುರಸಭೆಯೊಂದಿಗೆ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

Tags

Sandur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X