‘ಬಳ್ಳಾರಿ ಚಲೋ’ ಪಾದಯಾತ್ರೆಗೆ ವಿಜಯನಗರ ಯುವ ಮುಖಂಡರಿಂದ ಭವ್ಯ ಸ್ವಾಗತ
ಕುಡತಿನಿಯಲ್ಲಿ ಬಿ.ವೈ.ವಿಜಯೇಂದ್ರ, ಬಿ.ರಾಮುಲುಗೆ ಸನ್ಮಾನ

ಬಳ್ಳಾರಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ 9ನೇ ದಿನಕ್ಕೆ ಕಾಲಿಟ್ಟಿದ್ದು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜನಬೆಂಬಲದೊಂದಿಗೆ ಮುಂದುವರಿದಿದೆ. ಕುಡತಿನಿಯಲ್ಲಿ ನಡೆದ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಚಿವ ಬಿ.ರಾಮುಲು ಅವರಿಗೆ ವಿಜಯನಗರ ಜಿಲ್ಲೆಯ ಯುವ ಮುಖಂಡ ಪಾಟೀಲ್ ಕಲ್ಲೇಶ್ ಕೊಟ್ಟೂರು ಅವರ ನೇತೃತ್ವದಲ್ಲಿ ಭವ್ಯ ಸ್ವಾಗತ ನೀಡಿ ಸನ್ಮಾನಿಸಲಾಯಿತು.
ಕೊಟ್ಟೂರಿನ ಶ್ರೀ ಗುರುಬಸವೇಶ್ವರ ಸ್ವಾಮಿಯ ಭಾವಚಿತ್ರವನ್ನು ನೀಡಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ಮುಖಂಡ ಪಾಟೀಲ್ ಕಲ್ಲೇಶ್ ಕೊಟ್ಟೂರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ, ಅಭಿವೃದ್ಧಿ ಕುಂಠಿತ ಹಾಗೂ ಬೆಲೆ ಏರಿಕೆ ವಿರುದ್ಧ ಯುವ ಮೋರ್ಚಾ ಮತ್ತು ಬಿಜೆಪಿ ಕಾರ್ಯಕರ್ತರು ಹೋರಾಟ ಮುಂದುವರಿಸಲಿದ್ದಾರೆ ಎಂದು ಹೇಳಿದರು.
ನಗರ ಘಟಕದ ಅಧ್ಯಕ್ಷ ಅಂಗಡಿ ಪಂಪಾಪತಿ, ಮುಖಂಡರಾದ ಬಟನ್ ಬಸವರಾಜ್, ಯೋಗೇಶ್, ಸುನಿಲ್ ಕುಮಾರ್ ಸೇರಿದಂತೆ ವಿಜಯನಗರ ಮತ್ತು ಕೊಟ್ಟೂರಿನ ಬಿಜೆಪಿ ಪದಾಧಿಕಾರಿಗಳು, ಯುವ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.






