ಬಳ್ಳಾರಿ | ಬಾದನಹಟ್ಟಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಬಳ್ಳಾರಿ / ಕುರುಗೋಡು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಬಾದನಹಟ್ಟಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಾದನಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ “ಆರೋಗ್ಯದ ನಡಿಗೆ–ಜನರ ಬಳಿಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಬುಧವಾರ ಬಾದನಹಟ್ಟಿ ಉಪಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು.
ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಮಂಜುನಾಥ ಜವಳಿ ಅವರು ಉದ್ಘಾಟಿಸಿ ಮಾತನಾಡಿ, ಆಸಾಂಕ್ರಾಮಿಕ ರೋಗಗಳು, ಅವುಗಳಿಂದ ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗಗಳ ಕುರಿತು ಜನರಿಗೆ ಮಾಹಿತಿ ನೀಡಿದರು.
ಶಿಬಿರದಲ್ಲಿ ಹದಿಹರೆಯದವರು, ಗರ್ಭಿಣಿಯರು, ಚಿಕ್ಕ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ವೃದ್ಧರು ಸೇರಿದಂತೆ 75ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ. ಸುನಿಲ್, ನೇತ್ರಾಧಿಕಾರಿ ಪಲ್ಲವಿ, ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಜಯಶ್ರೀ, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಊರಿನ ಹಿರಿಯ ಮುಖಂಡರು, ಎನ್‌ಸಿಡಿ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದು ಶಿಬಿರಕ್ಕೆ ಸಹಕಾರ ನೀಡಿದರು.







