ಗಣಿಬಾಧಿತರಿಗೆ ಮನೆ: ಬಳ್ಳಾರಿಯಲ್ಲಿ 862 ಮನೆಗಳ ಶಂಕುಸ್ಥಾಪನೆ

ಬಳ್ಳಾರಿ, ಜ.04: ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಸಿಇಪಿಎಂಐಜೆಡ್ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ಗಣಿಬಾಧಿತ 10 ಗ್ರಾಮಗಳ ವಸತಿ ರಹಿತರಿಗೆ ಅನುಮೋದನೆಯಾದ 862 ಮನೆಗಳ ಶಂಕುಸ್ಥಾಪನೆಯನ್ನು ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ರವಿವಾರ ನೆರವೇರಿಸಿದರು.
ಈ ಯೋಜನೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಡಿ ಅನುಷ್ಠಾನಗೊಳ್ಳುತ್ತಿದೆ. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
Next Story





