ಕಂಪ್ಲಿ | ಬಿಜೆಪಿ ಮಂಡಲ ಅಧ್ಯಕ್ಷರ ಜನ್ಮದಿನ : ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ

ಕಂಪ್ಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತ ಹಾಗೂ ಬಳ್ಳಾರಿ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಬಳಿ ಗುರುವಾರ ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು.
ಸಿ.ಡಿ. ಮಹಾದೇವ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ, ಬಳಿಕ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಜನ್ಮದಿನವನ್ನು ಸರಳ ಹಾಗೂ ಸಮಾಜಮುಖಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಟೋ ಚಾಲಕ ಸುರೇಶ, ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಿಸುವ ಮೂಲಕ ಸಿ.ಡಿ. ಮಹಾದೇವ ಅವರು ಸಮಾಜಮುಖಿ ಕಾರ್ಯಕ್ಕೆ ಆದ್ಯತೆ ನೀಡಿದ್ದಾರೆ. ಅವರಿಗೆ ಇನ್ನಷ್ಟು ಶಕ್ತಿ ಹಾಗೂ ಉನ್ನತ ಸ್ಥಾನಮಾನ ದೊರೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಮೆಟ್ರಿ ಶಿವಕುಮಾರ, ನಾಗಲಿಂಗ, ಮಹಾಂತೇಶ, ಜಡೆಪ್ಪ, ಆನಂದ, ಪುನೀತ್ ಹಾಗೂ ಆಟೋ ಚಾಲಕರಾದ ಸುರೇಶ, ಅನೀಫ್, ಮೈಲಾರಿ, ನಾಗರಾಜ, ವೆಂಕಟೇಶ, ಕಾರ್ತಿಕ, ಭಾರ್ಗವ, ಶಿವು, ನಾಗಲಿಂಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.




