ಕಂಪ್ಲಿ | ಹೊಸಗೇರಪ್ಪ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಕಂಪ್ಲಿ: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾದ ಸಮಾರಂಭದಲ್ಲಿ, ಕಂಪ್ಲಿ–ಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಹೊಸಗೇರಪ್ಪ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹೊಸಗೇರಪ್ಪ ಅವರು, “ಸರ್ಕಾರಿ ಕೆಲಸ ದೇವರ ಕೆಲಸ ಎಂಬ ಮನೋಭಾವದೊಂದಿಗೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುತ್ತಾ, ಅವರ ಶ್ರೇಯೋಭಿವೃದ್ಧಿಗೆ ನಿರಂತರ ಶ್ರಮಿಸುತ್ತಾ ಬಂದಿದ್ದೇನೆ. ನಮ್ಮ ಸೇವೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿರುವುದು ಮತ್ತಷ್ಟು ಉತ್ಸಾಹ ಮತ್ತು ಸಂತೋಷವನ್ನು ತಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸೇವೆ ಸಲ್ಲಿಸುವೆ” ಎಂದರು.
ಸನ್ಮಾನ ಕಾರ್ಯಕ್ರಮ :
ಶುಕ್ರವಾರ ಕಂಪ್ಲಿ–ಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಶಸ್ತಿ ಪುರಸ್ಕೃತ ಹೊಸಗೇರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಸ್ವಾಮಿ ವಿವೇಕಾನಂದ ಶಾಲೆಯ ಮುಖ್ಯಗುರು ಬಿ. ಜಿಲಾನಸಾಬ್ ಮಾತನಾಡಿದರು.
ಈ ವೇಳೆ ಹಿರಿಯ ಶಿಕ್ಷಕ ಚಂದ್ರಶೇಖರ, ಮುಖಂಡ ಹುಸೇನ್ ಸಾಬ್ ಸೇರಿದಂತೆ ಇತರರು ಉಪಸ್ಥಿತರಿದ್ದರು.





