Kampli | ರೈತ ಸಂಪರ್ಕ ಕೇಂದ್ರದಲ್ಲಿ ಉಚಿತ ಬಿತ್ತನೆ ಬೀಜ ವಿತರಣೆ

ಕಂಪ್ಲಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯ ವತಿಯಿಂದ ಅರ್ಹ ರೈತರಿಗೆ ಉಚಿತವಾಗಿ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು. ಫಲಾನುಭವಿ ರೈತರಿಗೆ ತಲಾ 16 ಕೆ.ಜಿ. ಶೇಂಗಾ (ಕಡಲೆಕಾಯಿ) ಬೀಜ, ಜೋಳದ ಬಿತ್ತನೆ ಬೀಜ ಹಾಗೂ ಬೀಜೋಪಚಾರ ಔಷಧಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್ ರೆಡ್ಡಿ, ಕೃಷಿ ಇಲಾಖೆಯಿಂದ ವಿತರಿಸಲಾಗುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ಸಕಾಲದಲ್ಲಿ ವೈಜ್ಞಾನಿಕ ಪದ್ಧತಿಯಲ್ಲಿ ಬಿತ್ತನೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆಯಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಪ್ರಭಾರಿ ಕೃಷಿ ಅಧಿಕಾರಿ ಟಿ. ಜ್ಯೋತಿ, ತಾಂತ್ರಿಕ ವ್ಯವಸ್ಥಾಪಕರಾದ ಶಿವಾಜಿ ರಾಥೋಡ್, ನಾಗರಾಜ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ರೈತರಾದ ಹೊನ್ನೂರಪ್ಪ, ತಿಪ್ಪೇಸ್ವಾಮಿ, ತಿಪ್ಪಮ್ಮ, ವೆಂಕೋಬ, ದೇವರಾಜ, ರಘು, ಜಡೆಪ್ಪ, ಹುಲಿಗೆಮ್ಮ ಸೇರಿದಂತೆ ಹಲವರು ಬಿತ್ತನೆ ಬೀಜಗಳನ್ನು ಪಡೆದುಕೊಂಡರು.
Next Story




