Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ ಕೋಟೆ ಪ್ರದೇಶದ ಮಹಿಳೆಯರ ಮನವಿಗೆ...

ಕಂಪ್ಲಿ ಕೋಟೆ ಪ್ರದೇಶದ ಮಹಿಳೆಯರ ಮನವಿಗೆ ಪುರಸಭೆ ಸ್ಪಂದನೆ: 18 ಕೋತಿಗಳು ಸೆರೆ

ವಾರ್ತಾಭಾರತಿವಾರ್ತಾಭಾರತಿ9 Oct 2026 11:35 PM IST
share
ಕಂಪ್ಲಿ ಕೋಟೆ ಪ್ರದೇಶದ ಮಹಿಳೆಯರ ಮನವಿಗೆ ಪುರಸಭೆ ಸ್ಪಂದನೆ: 18 ಕೋತಿಗಳು ಸೆರೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಪುರಸಭೆ ವ್ಯಾಪ್ತಿಯ ಕೋಟೆ ಪ್ರದೇಶದಲ್ಲಿ ಕಳೆದ ಹಲವು ತಿಂಗಳುಗಳಿಂದ ಸಾರ್ವಜನಿಕರಿಗೆ ತೀವ್ರ ಉಪಟಳ ನೀಡುತ್ತಿದ್ದ ಕೋತಿಗಳನ್ನು ಸೆರೆಹಿಡಿಯುವಲ್ಲಿ ಪುರಸಭೆ ಆಡಳಿತ ಯಶಸ್ವಿಯಾಗಿದೆ.

ಕೋಟೆ ಪ್ರದೇಶದಲ್ಲಿ ಕೋತಿಗಳ ಹಾವಳಿ ಮಿತಿಮೀರಿದ್ದು, ದಾರಿಹೋಕರು, ಮಕ್ಕಳು ಹಾಗೂ ಮಹಿಳೆಯರ ಮೇಲೆ ದಾಳಿ ನಡೆಸಿ ಗಾಯಗೊಳಿಸುತ್ತಿದ್ದವು. ಇದರಿಂದ ಆತಂಕಗೊಂಡಿದ್ದ ಸ್ಥಳೀಯ ಮಹಿಳೆಯರು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಅವರಿಗೆ ಇತ್ತೀಚೆಗೆ ಮನವಿ ಪತ್ರ ಸಲ್ಲಿಸಿ, ಕೋತಿಗಳ ಹಾವಳಿಯಿಂದ ರಕ್ಷಣೆ ನೀಡುವಂತೆ ಒತ್ತಾಯಿಸಿದ್ದರು.

ಮಹಿಳೆಯರ ಮನವಿಗೆ ತಕ್ಷಣ ಸ್ಪಂದಿಸಿದ ಪುರಸಭೆ ಅಧಿಕಾರಿಗಳು, ಹೊರಗಿನಿಂದ ಕೋತಿ ಸೆರೆಹಿಡಿಯುವ ಪರಿಣಿತರನ್ನು ಕರೆಯಿಸಿ, ಕೋಟೆ ಆವರಣದಲ್ಲಿ ಬೋನು ಅಳವಡಿಸಿದ್ದರು. ಕಾರ್ಯಾಚರಣೆಯ ಫಲವಾಗಿ ಸುಮಾರು 18 ಕೋತಿಗಳು ಬೋನಿಗೆ ಬಿದ್ದಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಅವರು, "ಕೋಟೆ ಪ್ರದೇಶದ ಮಹಿಳೆಯರ ದೂರಿನ ಮೇರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಬೋನು ತರಿಸಿ ಕೋತಿಗಳನ್ನು ಸೆರೆಹಿಡಿಯಲಾಗಿದೆ. ಸೆರೆಸಿಕ್ಕ 18 ಕೋತಿಗಳನ್ನು ಸುರಕ್ಷಿತವಾಗಿ ದೂರದ ಅರಣ್ಯ ಪ್ರದೇಶಕ್ಕೆ ಬಿಟ್ಟು ಬರಲಾಗುವುದು. ಜತೆಗೆ ಬಡಾವಣೆಯಲ್ಲಿ ಉಳಿದಿರುವ ಇತರ ಕೋತಿಗಳನ್ನೂ ಹಂತ-ಹಂತವಾಗಿ ಸೆರೆಹಿಡಿದು ಕಾಡಿಗೆ ಬಿಡಲಾಗುವುದು," ಎಂದು ತಿಳಿಸಿದರು.

ಕೋತಿಗಳ ಕಾಟದಿಂದ ಕಂಗಾಲಾಗಿದ್ದ ಸ್ಥಳೀಯ ನಿವಾಸಿಗಳು ಪುರಸಭೆಯ ತ್ವರಿತ ಕ್ರಮಕ್ಕೆ ನೆಮ್ಮದಿ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ವೇಳೆ ಪುರಸಭೆಯ ಸಿಬ್ಬಂದಿ, ಕೋತಿ ಹಿಡಿಯುವ ತಂಡ ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Tags

monkeysKampli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X